Log In
BREAKING NEWS >
ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ....

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ, ಉಮಾ ಭಾರತಿ ಸೇರಿ ಎಲ್ಲ ಆರೋಪಿಗಳಿಗೆ ಜಾಮೀನು ಮಂಜೂರು

ಲಖನೌ:  1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರಾದ ಎಲ್ ಕೆ ಅಡ್ವಾಣಿ, ಕೇಂದ್ರ ಸಚಿವೆ ಉಮಾಭಾರತಿ ಹಾಗೂ ಮುರಳಿ ಮನೋಹರ ಜೋಷಿ ಸೇರಿದಂತೆ ಪ್ರಕರಣದ ಎಲ್ಲ ಪ್ರಮುಖ 12  ಆರೋಪಿಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಪ್ರಕರಣ ಸಂಬಂಧ ಉತ್ತರ ಪ್ರದೇಶದ ಲಖನೌನಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನ್ಯಾಯಮೂರ್ತಿ ಎಸ್ ಕೆ ಯಾದವ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗಿದ್ದು, ಇದೀಗ ಎಲ್ ಕೆ ಅಡ್ವಾಣಿ, ಕೇಂದ್ರ ಸಚಿವೆ  ಉಮಾಭಾರತಿ ಹಾಗೂ ಮುರಳಿ ಮನೋಹರ ಜೋಷಿ ಸೇರಿದಂತೆ ಪ್ರಕರಣದ ಎಲ್ಲ ಪ್ರಮುಖ 12 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದಾರೆ.ಈ ಹಿಂದಿನ ವಿಚಾರಣೆಯಲ್ಲಿ ಆರೋಪಿಗಳು ಖುದ್ಧು ಹಾಜರಾತಿಯಾಗದ ಹೊರತು ಅವರ ಯಾವುದೇ ರೀತಿಯ ಮನವಿ ಮತ್ತು ಅರ್ಜಿಗಳನ್ನು ಸ್ಪೀಕರಿಸುವುದಿಲ್ಲ ಎಂದು ನ್ಯಾಯಮೂರ್ತಿ ಎಸ್ ಕೆ ಯಾದವ್ ಸ್ಪಷ್ಟಪಡಿಸಿದ್ದರು.

ಈ  ಹಿನ್ನಲೆಯಲ್ಲಿ ಎಲ್ಲ ಆರೋಪಿಗಳು ಇಂದು ವಿಚಾರಣೆಗೆ ಖುದ್ಧು ಹಾಜರಾಗಿ, ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಇದೀಗ ಜಾಮೀನು ಅರ್ಜಿ ಪುರಸ್ಕರಿಸಿರುವ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ತಲಾ 50 ಸಾವಿರ ರು.ಗಳ ಬಾಂಡ್ ನೀಡಿ ಜಾಮೀನು ಪಡೆಯುವಂತೆ ಆದೇಶ ನೀಡಿದೆ.ಆರೋಪ ದಾಖಲು ಮಾಡದಂತೆ ಮುಖಂಡರ ಮನವಿವಿಚಾರಣೆ ವೇಳೆ ತಮ್ಮ ವಿರುದ್ಧದ ಆರೋಪಗಳ ಪಟ್ಟಿಯನ್ನು ದಾಖಲು ಮಾಡಿಕೊಳ್ಳದಂತೆ ಕೋರಿ ಎಲ್ ಕೆ ಅಡ್ವಾಣಿ, ಉಮಾಭಾರತಿ, ಎಂಎಂ ಜೋಷಿ ಸೇರಿದಂತೆ 12 ಮಂದಿ ಆರೋಪಿಗಳು ನ್ಯಾಯಾಲಯದಲ್ಲಿ ಮನವಿ ಮಾಡಿಕೊಂಡರು. ಇದಕ್ಕಾಗಿ ತಮ್ ಪರ ವಕೀಲ ಪ್ರಶಾಂತ್ ಅಟಲ್ ಅವರ ಮೂಲಕವಾಗಿ ಡಿಸ್ಚಾರ್ಜ್ ಅರ್ಜಿಯನ್ನೂ ಕೂಡ ಸಲ್ಲಿಕೆ ಮಾಡಿದ್ದರು. ಆದರೆ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿದೆ.

No Comments

Leave A Comment