Log In
BREAKING NEWS >
ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30 ಮತ್ತು 31ರಂದು ಬ್ಯಾಂಕ್‌ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ....

ಜಮ್ಮು-ಕಾಶ್ಮೀರ: ಸೇನಾ ನೆಲೆ ಮೇಲೆ ಉಗ್ರರ ದಾಳಿ, ಇಬ್ಬರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿರುವ ಸೇನಾ ನೆಲೆ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಹುತಾತ್ಮರಾಗಿದ್ದು, ನಾಲ್ಕು ಯೋಧರಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ.

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಲೋಯರ್ ಮುಂಡಾ ಟೋಲ್ ಪೋಸ್ಟ್ ಬಳಿಯಿರುವ ಖಾಜಿಗಂಡ್ ಪ್ರದೇಶದಲ್ಲಿ ಸೇನಾ ಸೇನೆ ಮೇಲೆ ಉಗ್ರರು ದಾಳಿ ನಡೆಸಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನಾ ನೆಲೆಯಲನ್ಲನು ಗುರಿಯಾಗಿಸಿಕೊಂಡು ಉಗ್ರರು ಭಾರೀ ಗುಂಡಿನ ದಾಳಿ ನಡೆಸಿದ್ದು, ಗಾಯಗೊಂಡ ಯೋಧರನ್ನು ಸೇನೆಯ 92 ಬೇಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಸೇನಾ ಪಡೆಗಳು ಸುತ್ತುವರೆದಿದ್ದು, ಉಗ್ರರನ್ನು ಸದೆಬಡಿಯಲು ಸೇನಾ ಪಡೆ ಕಾರ್ಯಾಚರಣೆಯನ್ನು ಆರಂಭಿಸಿದೆ. ಕಾರ್ಯಾಚರಣೆ ಹಿನ್ನಲೆಯಲ್ಲಿ ಹೆದ್ದಾರಿ ಸಂಚಾರವನ್ನು ಬಂದ್ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

No Comments

Leave A Comment