Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಲಂಡನ್‌ನಲ್ಲಿ ಉಗ್ರರ ಅಟ್ಟಹಾಸ :6 ಸಾವು,3 ಉಗ್ರರ ಹತ್ಯೆ

ಲಂಡನ್‌: ನಗರದ ಮೂರು ಪ್ರತ್ಯೇಕ ಕಡೆಗಳಲ್ಲಿ ಶನಿವಾರ ರಾತ್ರಿ ಶಂಕಿತ ಉಗ್ರರು ದಾಳಿ ನಡೆಸಿ ಅಟ್ಟಹಾಸ ಗೈದಿದ್ದು, 6 ಮಂದಿ ಸಾವನ್ನಪ್ಪಿ 30 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿ ನಡೆಸಿದ ಮೂವರೂ ಉಗ್ರರನ್ನು ಪೊಲೀಸರು ಗುಂಡಿಟ್ಟು ಹತ್ಯೆಗೈದಿದ್ದಾರೆ.

ಉಗ್ರರು ಲಂಡನ್‌ ರೈಲ್ವೇ ಬ್ರಿಡ್ಜ್ ಬಳಿ ಪಾದಾಚಾರಿಗಳ ಮೇಲೆ ಬಿಳಿ ವ್ಯಾನ್‌ನನ್ನು ಎಲ್ಲೆಂದರಲ್ಲಿ ಹರಿಸಿದ್ದಾರೆ. ಜನನಿಬಿಡ ಬರೋ ಮಾರ್ಕೆಟ್‌ನಲ್ಲಿ ಸಿಕ್ಕ ಸಿಕ್ಕವರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ್ದಾರೆ.

ಇದೊಂದು ಉಗ್ರರ ದಾಳಿ ಎಂದು ಇಂಗ್ಲೆಂಡ್‌ ಪ್ರಧಾನಿ ತೆರೇಸಾ ಮೇ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದಾಳಿಯನ್ನು ಬಲವಾಗಿ ಖಂಡಿಸಿದ್ದು ನಾವು ಇಂಗ್ಲೆಂಡ್‌ನೊಂದಿಗೆ ಇದ್ದೇವೆ ಎಂದು ಟ್ವಿಟ್‌ ಮಾಡಿದ್ದಾರೆ.

ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಎಲ್ಲಾ ಸಾಧ್ಯತೆಗಳಿವೆ. ಲಂಡನ್‌ ನಗರದಾದ್ಯಂತ ಹೈಅಲರ್ಟ್‌ ಘೋಷಿಸಲಾಗಿದೆ. ಜನರು ದಾಳಿಯಿಂದ ಕಂಗಾಲಾಗಿ ಹೋಗಿದ್ದಾರೆ.

ಮೇ 22 ರಂದು ಮ್ಯಾಂಚೆಸ್ಟರ್‌ ಆತ್ಮಾಹುತಿ ದಾಳಿ ಕೋರ ತನ್ನನ್ನು ತಾನು ಸ್ಫೋಟಿಸಿಕೊಂಡ ಪರಿಣಾಮ 22 ಮಂದಿ ದಾರುಣವಾಗಿ ಸಾವನ್ನಪ್ಪಿದ್ದರು. ಆ ಬಳಿಕ ನಡೆದ ಭೀಕರ ದಾಳಿ ಇದಾಗಿದೆ.

No Comments

Leave A Comment