Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಇನ್ನೂ ನಿಂತಿಲ್ಲ ಬ್ಲ್ಯಾಕ್ ಅಂಡ್ ವೈಟ್ ದಂಧೆ; 5.80 ಕೋಟಿ ಹಳೇನೋಟು ವಶ

ಬೆಂಗಳೂರು:ರಾಜ್ಯದಲ್ಲಿ ಬ್ಲ್ಯಾಕ್ ಅಂಡ್ ವೈಟ್ ದಂಧೆ ಮುಂದುವರಿದಿದ್ದು ಸಿಲಿಕಾನ್ ಸಿಟಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದಾಗಿ ಎಂಟು ಮಂದಿ ಕಪ್ಪು ಖದೀಮರು ಬಲೆಗೆ ಬಿದ್ದಿದ್ದು, ಬಂಧಿತರಿಂದ  5ಕೋಟಿ 80 ಲಕ್ಷ ರೂಪಾಯಿ ಮೌಲ್ಯದ ಹಳೇ ನೋಟನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಬ್ಲ್ಯಾಕ್ ಅಂಡ್ ವೈಟ್ ದಂಧೆಯ ಖದೀಮರು ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  ಸೋಮವಾರ ನಗರದ ಕಬ್ಬನ್ ಪಾರ್ಕ್ ಬಳಿ 1.5 ಕೋಟಿ ರೂಪಾಯಿ ಮೌಲ್ಯದ ಹಳೇ ನೋಟುಗಳನ್ನು ವಶಪಡಿಸಿಕೊಂಡಿದ್ದರು.

ಇಂದು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಹಳೇನೋಟು ದಂಧೆಯ ಖದೀಮರನ್ನು ಬಂಧಿಸಿದ್ದಾರೆ. ಬಂಧನಕ್ಕೊಳಗಾದವರನ್ನು ಸುರೇಶ್, ರಘುನಂದನ್, ರಾಜೇಶ್, ರವೀಂದ್ರನಾಥ್, ಸದಾಶಿವ, ಹರ್ಷ, ಇಕ್ಬಾಲ್ ಮಹಮ್ಮದ್ ಎಂದು ಗುರುತಿಸಲಾಗಿದೆ. ಅವರಿಂದ 5.80 ಕೋಟಿ ಮೌಲ್ಯದ ಹಳೇ ನೋಟು ವಶಪಡಿಸಿಕೊಳ್ಳಲಾಗಿದೆ.

No Comments

Leave A Comment