Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಮಧ್ಯಪ್ರದೇಶ; ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಗೋಲಿಬಾರ್, 4 ಸಾವು; ಕರ್ಫ್ಯೂ ಜಾರಿ

ಇಂದೋರ್: ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಮಧ್ಯಪ್ರದೇಶ ಪೊಲೀಸರು ಮಂಗಳವಾರ ಗೋಲಿಬಾರ್ ಮಾಡಿದ್ದು, ಘಟನೆಯಲ್ಲಿ ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಂಡಸೋರ್ ಜಿಲ್ಲೆಯಲ್ಲಿ ಸಾಲ ಮನ್ನಾ ಸೇರಿದಂತೆ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ನೀಡಬೇಕು ಎಂದು ಒತ್ತಾಯಿಸಿ ಕಳೆದ 6 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಆದರೆ ಇಂದು ರೈತರ ಪ್ರತಿಭಟನೆ ಇದ್ದಕ್ಕಿದ್ದಂತೆ ಹಿಂಸಾರೂಪಕ್ಕೆ ತಿರುಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮತ್ತು ಸಿಆರ್ ಪಿಎಫ್ ಯೋಧರು ರೈತರ ಮೇಲೆ ಗೋಲಿಬಾರ್ ಮಾಡಿದ್ದಾರೆ.

ಗೋಲಿಬಾರ್ ನಿಂದಾಗಿ ಚಿಲೋಡ್ ಪಿಪ್ಲಿಯ ಕನ್ನಯ್ಯಲಾಲ್ ಪಟಿದಾರ್ ಮತ್ತು ಬನ್ಶಿ ಪಟಿದಾರ್ ಸೇರಿದಂತೆ ನಾಲ್ವರು ರೈತರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಳ್ಮೆ ಕಳೆದುಕೊಂಡ ರೈತರು ಸುಮಾರು 10ಕ್ಕು ಹೆಚ್ಚು ಲಾರಿಗಳಿಗೆ ಹಾಗೂ ಮೂರು ದ್ವಿಚಕ್ರ ವಾಹನ ಸೇರಿದಂತೆ ಹಲವು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಮಂಡಸೋರ್ ಮತ್ತು ಪಿಪ್ಲಿಮಂಡಿ ಪ್ರದೇಶದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಉಜ್ಜೈನ್ ಉಪ ವಿಭಾಗೀಯ ಆಯುಕ್ತ ಎಂ.ಬಿ.ಒಜಾ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ರೈತರ ಈ ಪ್ರತಿಭಟನೆ ಹಿನ್ನಲೆಯಲ್ಲಿ ಮಂಡ್‍ಸೌರ್, ರಾಟ್ಲಾಂ ಮತ್ತು ಉಜ್ಜೈನ್‍ನಲ್ಲಿ ಅಂತರ್ಜಾಲ ಸಂಪರ್ಕ ಸ್ಥಗಿತಗೊಳಿಸಲಾಗಿದೆ, ರಾಷ್ಟ್ರೀಯ ಕಿಸಾನ್ ಮಜದೂರ್ ಸಂಘ್ ಬುಧವಾರ ರಾಜ್ಯದಾದ್ಯಂತ ಬಂದ್‍ಗೆ ಕರೆ ನೀಡಿದೆ.

ಇನ್ನು ರೈತರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಅಕ್ಟೋಬರ್ 31ರೊಳಗೆ ರೈತರ ಸಾಲ ಮನ್ನಾ ಮಾಡಲಾಗುವುದು, ಭಾರತದಲ್ಲಿ ಇದೇ ದೊಡ್ಡ ಮಟ್ಟದ ಸಾಲ ಮನ್ನಾ ಆಗಲಿದೆ ಎಂದಿದ್ದಾರೆ. ಅಲ್ಲದೆ ಗೋಲಿ ಬಾರ್ ನಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ತಲಾ 10 ಲಕ್ಷ ರುಪಾಯಿ ಪರಿಹಾರ ಹಾಗೂ ಗಾಯಾಳುಗಳಿಗೆ 1 ಲಕ್ಷ ರುಪಾಯಿ ಪರಿಹಾರ ಘೋಷಿಸಿದ್ದಾರೆ ಮತ್ತು ಗೋಲಿಬಾರ್ ಘಟನೆ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಧ್ಯಪ್ರದೇಶ ಗೃಹ ಸಚಿವ ಭುಪೇಂದ್ರ ಸಿಂಗ್ ಅವರು, ಗೋಲಿ ಬಾರ್ ಪೊಲೀಸರು ಮಾಡಿದ್ದಾರೋ ಅಥವಾ ಸಿಆರ್ ಪಿಎಫ್ ಯೋಧರು ಮಾಡಿದ್ದಾರೋ ಎಂಬುದರ ಬಗ್ಗೆ ಇನ್ನು ಸ್ಪಷ್ಟ ಮಾಹಿತಿ ಇಲ್ಲ. ಈ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ ಘಟನೆಯ ಹಿಂದೆ ಕಲವು ಸಮಾಜ ವಿರೋಧಿ ಶಕ್ತಿಗಳ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

No Comments

Leave A Comment