Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಸುಪ್ರೀಂ ಕೋರ್ಟ್ ಆದೇಶ ಪಾಲನೆ: ರಾಜ್ಯದ 6 ಸಾವಿರ ಮದ್ಯದ ಅಂಗಡಿಗಳಿಗೆ ಮುಚ್ಚಲೇಬೇಕಾದ ಆತಂಕ

ಬೆಂಗಳೂರು: ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳಿಂದ 500 ಮೀಟರ್ ವ್ಯಾಪ್ತಿಯಲ್ಲಿರುವ ಮದ್ಯದ ಅಂಗಡಿಗಳನ್ನು ತೆರವುಗೊಳಿಸಬೇಕೆಂಬ ಸುಪ್ರೀಂ ಕೋರ್ಟ್ ನ ಆದೇಶದ ಪ್ರಕಾರ ರಾಜ್ಯದಲ್ಲಿ 6,000 ಮದ್ಯದ ಅಂಗಡಿಗಳು ಬೇರೆ ಮಾರ್ಗ ಇಲ್ಲದೇ ಮುಚ್ಚಬೇಕಾಗಿವೆ.

500 ಮೀಟರ್ ವ್ಯಾಪ್ತಿಯಲ್ಲಿರುವ ಮದ್ಯದ ಅಂಗಡಿಗಳನ್ನು ಮುಚ್ಚುವುದಕ್ಕೆ ಸುಪ್ರೀಂ ಕೋರ್ಟ್ ಜೂ. 30 ರ ಗಡುವು ನೀಡಿದ್ದು, ಈ ವರೆಗೂ 38 ಬಾರ್/ ರೆಸ್ಟೋರೆಂಟ್ ಗಳು ಸ್ಥಳಾಂತರಗೊಂಡಿವೆ. ಅಧಿವೇಶನದಲ್ಲಿ ಅಬಕಾರಿ ಇಲಾಖೆ ಈ

ಬಗ್ಗೆ ಮಾಹಿತಿ ಬಹಿರಂಗಗೊಳಿಸಿದ್ದು, ಇನ್ನು 24 ದಿನಗಳಲ್ಲಿ 5,977 ಅಂಗಡಿಗಳು ಸ್ಥಳಾಂತರಗೊಳ್ಳಬೇಕಿದೆ ಎಂದು ಹೇಳಿದೆ.

ರಾಜ್ಯ ಹೆದ್ದಾರಿಯ 500 ಮೀಟರ್ ವ್ಯಾಪ್ತಿಯಲ್ಲಿ 3,307 ಮದ್ಯದ ಅಂಗಡಿಗಳು, ರೆಸ್ಟೋರೆಂಟ್ ಗಳಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ 2,708 ಮದ್ಯದ ಅಂಗಡಿಗಳಿವೆ. ಈ ಎಲ್ಲಾ ಮದ್ಯದ ಅಂಗಡಿಗಳು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಜೂ.30 ರ ಒಳಗೆ ಸ್ಥಳಾಂತರಗೊಳ್ಳಬೇಕಿದೆ.

No Comments

Leave A Comment