Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಆಧಾರ್-ಪ್ಯಾನ್ ಲಿಂಕ್ ಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ!

ನವದೆಹಲಿ: ಕೇಂದ್ರ ಸರ್ಕಾರದ ಉದ್ದೇಶಿತ ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ವಿಚಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಾತ್ಕಾಲಿಕ ತಡೆ ನೀಡಿದೆ.ರಾಮನ್ ಮ್ಯಾಗ್ಸಸೆ ಪ್ರಶಸ್ತಿ ವಿಜೇತ ಬೆಜ್ವಾಡ ವಿಲ್ಸನ್, ಕೇರಳದ ಮಾಜಿ ಸಚಿವ ಬಿನೋಯ್ ವಿಶ್ವಂ ಹಾಗೂ ನಿವೃತ್ತ ಸೇನಾಧಿಕಾರಿ ಎಸ್ ಜಿ ವಂಬಟ್ಕರೆ ಅವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್  ನ್ಯಾಯಮೂರ್ತಿ ಎಕೆ ಸಿಕ್ರಿ ಮತ್ತು ಅಶೋಕ್ ಭೂಷಣ್ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿ ವಿಚಾರಣೆಯನ್ನು ತಾತ್ಕಾಲಿಕ ಮುಂದೂಡಿದೆ.

ಆ ಮೂಲಕ ಆದಾಯ ತೆರಿಗೆ ಸಲ್ಲಿಕೆಗೆ ಆಧಾರ್ ಕಾರ್ಡ್ ಕಡ್ಡಾಯ ವಿಚಾರಕ್ಕೂ ತಾತ್ಕಾಲಿಕ  ತಡೆ ನೀಡಿದಂತಾಗಿದೆ.ಅಂದರೆ ಆಧಾರ್‌ ಕಾರ್ಡ್‌ ಹೊಂದಿಲ್ಲದಿದ್ದರೆ, ಪ್ಯಾನ್‌ ಕಾರ್ಡ್‌ ಜತೆ ಆಧಾರ್‌ ಜೋಡಣೆ ಮಾಡಬೇಕಾಗಿರುವುದಿಲ್ಲ. ಪ್ಯಾನ್‌ ಜತೆ ಆಧಾರ ಜೋಡಣೆ ಮಾಡಿಸಿಲ್ಲ ಎಂಬ ಕಾರಣಕ್ಕೆ ನಾಗರಿಕರ ಪ್ಯಾನ್‌ ಕಾರ್ಡ್‌ ಅನ್ನು ಕೇಂದ್ರ ಸರ್ಕಾರ ರದ್ದುಗೊಳಿಸುವಂತಿಲ್ಲ.ನಕಲಿ ಪ್ಯಾನ್ ಕಾರ್ಡ್ ದೇಶದ ಬೆಳವಣಿಗೆಯಲ್ಲಿ ದೊಡ್ಡ ಬೆದರಿಕೆಯಾಗಿದ್ದು, ಅದರ ತಡೆಗೆ ಸಂಸತ್ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ. ಅಂತೆಯೇ ಕೇಂದ್ರ ಸರ್ಕಾರ ಆಧಾರ್ ಕಾರ್ಡ್  ದತ್ತಾಂಗಳು ಸೋರಿಕೆಯಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದೂ ಸುಪ್ರೀಂ ಕೋರ್ಟ್ ಹೇಳಿದೆ.

ಈ ಹಿಂದಿನ ವಿಚಾರಣೆಯಲ್ಲಿ ಕೇಂದ್ರ ಸರ್ಕಾರ ನಕಲಿ ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ತಡೆಯುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದೆ. ಅಂತೆಯೇ ಸರ್ಕಾರದ ಪರ ವಾದ ಮಂಡಿಸಿದ್ದ  ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ಅವರು, ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 139 ಎ ಪ್ರಕಾರ ಆದಾಯ ತೆರಿಗೆ ಸಲ್ಲಿಕೆಗೆ ಪ್ಯಾನ್ ಕಾರ್ಡ್ ಕಡ್ಡಾಯವಾಗಿದ್ದು, ಆಧಾರ್ ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಬೇಕಿದೆ ಅಷ್ಟೇ ಎಂದು  ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು.

No Comments

Leave A Comment