Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಮುಂಬಯಿ :ಫ್ಲ್ಯಾಟ್‌ನಲ್ಲಿ ನಟಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮುಂಬಯಿ : ಇಲ್ಲಿನ ಅಂಧೇರಿಯ ಭೈರವ್‌ನಾಥ್‌ ಸೊಸೈಟಿಯ ಚಾರ್‌ಬಂಗ್ಲೋ ಫ್ಲ್ಯಾಟ್‌ನಲ್ಲಿ ನಟಿ  ಕೃತಿಕಾ ಚೌಧರಿ ಶವ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಇದನ್ನು ಕೊಲೆ ಎಂದು ತಿಳಿಸಿದ್ದಾರೆ.

ಸೋಮವಾರ ಸಂಜೆ 3.30 ರ ವೇಳೆಕೆ ಕೃತಿಕಾ ನಿವಾಸದಿಂದ ಕೆಟ್ಟ ವಾಸನೆ ಬರುತ್ತಿದ್ದ ಹಿನ್ನಲೆಯಲ್ಲಿ ಅನುಮಾನಗೊಂಡ ನೆರೆಮನೆಯ  ನಿವಾಸಿಗಳು ಅಂಬೋಲಿ ಪೊಲೀಸರಿಗೆ ತಿಳಿಸಿದ್ದರು.

ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ಒಡೆದು ಒಳಪ್ರವೇಶಿಸಿದಾಗ 30 ರ ಹರೆಯದ ನಟಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಆಕ್ಸಿಡೆಂಟಲ್‌ ಡೆತ್‌ ರಿಪೋರ್ಟ್‌ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

No Comments

Leave A Comment