Log In
BREAKING NEWS >
ನಾಡಿನ ಸಮಸ್ತ ಜನತೆಗೆ, ನಮೆಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನಾಗರ ಪ೦ಚಮಿ ಹಾಗೂ ನೇ ಸ್ವಾತ೦ತ್ರೋತ್ಸವದ ಶುಭಾಶಯಗಳು....

ಲಂಡನ್ ನಲ್ಲಿ 27 ಅಂತಸ್ತಿನ ಕಟ್ಟಡಕ್ಕೆ ಭಾರೀ ಬೆಂಕಿ, ಹಲವು ಸಾವು?

ಲಂಡನ್: 27 ಅಂತಸ್ತಿನ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದ್ದು, ಹಲವಾರು ಮಂದಿ ಅಪಾಯದಲ್ಲಿ ಸಿಲುಕಿರುವ ಘಟನೆ ಪಶ್ಚಿಮ ಲಂಡನ್ ಲ್ಯಾಟಿಮಾರ್ ನಲ್ಲಿ ಬುಧವಾರ ಬೆಳಗ್ಗೆ ನಸುಕಿನ ವೇಳೆ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಕಟ್ಟಡದ ಮೇಲ್ಮಹಡಿಯಲ್ಲಿ ವಾಸವಾಗಿರುವವರು ರಕ್ಷಣೆಗಾಗಿ ಚೀರಾಡುತ್ತಿರುವ ಶಬ್ದ ಕೇಳಿಸುತ್ತಿರುವುದಾಗಿ ಪ್ರತ್ಯಕ್ಷದರ್ಶಿಗಳು ಮಾಧ್ಯಮಕ್ಕೆ ತಿಳಿಸಿದ್ದು, 200ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳು  ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಸುಮಾರು 127 ಫ್ಲ್ಯಾಟ್ಸ್ ಈ ಕಟ್ಟಡದಲ್ಲಿ ಇದ್ದಿರುವುದಾಗಿ ವರದಿ ವಿವರಿಸಿದೆ.

ಬಹುಮಹಡಿ ಕಟ್ಟಡದ ಒಂದು ಭಾಗದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವ ದೃಶ್ಯದ ಫೋಟೋವನ್ನು ಅಗ್ನಿಶಾಮಕ ದಳ ಬಿಡುಗಡೆ ಮಾಡಿದೆ. ಫ್ಲ್ಯಾಟ್ಸ್ ನೊಳಗೆ ಸಿಲುಕಿಕೊಂಡಿರುವವರನ್ನು ರಕ್ಷಿಸುವ ಕಾರ್ಯ ಮುಂದುವರಿದಿದ್ದು, ಈವರೆಗೂ ಯಾವುದೇ ಸಾವು, ನೋವಿನ ಕುರಿತು ವರದಿಯಾಗಿಲ್ಲ. ಕೆಲವು ಮಾಧ್ಯಮದ ವರದಿ ಪ್ರಕಾರ ಹಲವಾರು ಮಂದಿ ಸಾವನ್ನಪ್ಪಿರುವ ಸಾಧ್ಯತೆ ಇದ್ದಿರುವುದಾಗಿ ಶಂಕಿಸಿವೆ.

 

No Comments

Leave A Comment