Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಹಿಮಾಚಲಪ್ರದೇಶ: ಬಹುಹಂತದ ಕಟ್ಟಡ ಕುಸಿತ- 11 ಜನರ ಸಾವು

ನುರ್ಪುರ್: ಹಿಮಾಚಲಪ್ರದೇಶದ ಕಂಗ್ರಾ ಜಿಲ್ಲೆಯ ನುರ್ಪುರ್ ನಲ್ಲಿ ಬಹುಹಂತದ ಕಟ್ಟಡವೊಂದು ಕುಸಿದುಬಿದ್ದಿದ್ದು, ಪರಿಣಾಮ 11 ಜನ ಕೂಲಿ ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಕ್ರುವಾರ ನಡೆದಿದೆ.

ಫುಟ್ ವೇರ್ ಅಂಗಡಿಯ ಪಕ್ಕ ಫೌಂಡೇಶನ್ ಗಾಗಿ ಸುಮಾರು 12ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಭೂಮಿಯನ್ನು ಅಗೆಯುತ್ತಿದ್ದರು. ಈ ವೇಳೆ ಫುಟ್ ವೇರ್ ಶಾಪ್ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕರ ಮೇಲೆ ಕುಸಿದು ಬಿದ್ದಿದೆ.

ದುರಂತದಲ್ಲಿ 11ಕ್ಕೂ ಹೆಚ್ಚು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ದುರ್ಘಟನೆ ಸಂಭವಿಸುತ್ತಿದ್ದಂತೆ ಕಾರ್ಯಾಚರಣೆಗಿಳಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಇದೀಗ ಓರ್ವ ಕೂಲಿ ಕಾರ್ಮಿಕನ ದೇಹವನ್ನು ಹೊರ ತೆಗೆದಿದ್ದಾರೆ. ಮತ್ತಿಬ್ಬರು ವ್ಯಕ್ತಿಗಳಿಗೆ ತೀವ್ರವಾಗಿ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತಷ್ಟು ಕಾರ್ಮಿಕರು ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನಲೆಯಲ್ಲಿ ರಕ್ಷಣಾ ಕಾರ್ಯಾಚಱಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ. ರಕ್ಷಣಾ ಕಾರ್ಯಾಚರಣೆಗೆ ಇದೀಗ ಎನ್ ಡಿಆರ್’ಎಫ್ ತಂಡ ಕೂಡ ಕೈಜೋಡಿಸಿದೆ.

No Comments

Leave A Comment