Log In
BREAKING NEWS >
ಗೋಶಾಲೆಯಲ್ಲಿ 200 ಹಸುಗಳ ಸಾವು ಪ್ರಕರಣ: ಬಿಜೆಪಿ ಮುಖಂಡ ಬಂಧನ....ಉಗ್ರರು ಒಳ ನಸುಳಿರುವ ಶಂಕೆ: ಶೋಪಿಯಾನ್ ಜಿಲ್ಲೆಯ 9 ಗ್ರಾಮಗಳಲ್ಲಿ ತೀವ್ರ ಸೇನಾ ಶೋಧ....

ಅಮಾನವೀಯ ಘಟನೆ- ಹರಿಯಾಣ: ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಸೊಹ್ನಾ: ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ಆಕೆಯನ್ನು ನೊಯ್ಡಾ ಪ್ರದೇಶದ ಹೊರವಲಯದಲ್ಲಿ ಬಿಸಾಡಿ ಹೋಗಿರುವ ಅಮಾನವೀಯ ಘಟನೆ ನಡೆದಿದೆ.

ಅತ್ಯಾಚಾರ ಸಂತ್ರಸ್ತೆಯಾದ ಮಹಿಳೆ ರಾಜಸ್ತಾನದ ಭಾರತಪುರ ನಿವಾಸಿಯಾಗಿದ್ದು, ನಿರ್ಜನ ಪ್ರದೇಶದಲ್ಲಿ ಬಿದ್ದಿದ್ದರು. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಸಂತ್ರಸ್ತ ಮಹಿಳೆಯು ಸೊಹ್ನಾದಲ್ಲಿರುವ ಸಂಬಂಧಿಯನ್ನು ಭೇಟಿ ಮಾಡಲು ಹೋಗಿದ್ದರು.  ಸುಮಾರು. 8 ರಿಂದ 8.30 ರ ವೇಳೆಗೆ ಸ್ವಿಫ್ಟ್ ಕಾರಿನಲ್ಲಿ ಬಂದ ಕೆಲವು ದುಷ್ಕರ್ಮಿಗಳು ಮಹಿಳೆಯನ್ನು ಕಾರಿನಲ್ಲಿ ಎಳೆದುಕೊಂಡು ಅತ್ಯಾಚಾರ ಎಸಗಿದ್ದಾರೆ. ಈ ಸಂಬಂಧ ಈಗಾಗಲೇ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

No Comments

Leave A Comment