Log In
BREAKING NEWS >
ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30 ಮತ್ತು 31ರಂದು ಬ್ಯಾಂಕ್‌ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ....

ದಕ್ಷಿಣ ಕನ್ನಡ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಕ ಮಾಡಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ದಕ್ಷಿಣಕನ್ನಡ ಜಿಲ್ಲೆಯ ಎಸ್ಪಿಯಾಗಿದ್ದ ಭೂಷಣ್ ಜಿ ಬೊರಸೆ ಅವರನ್ನು ಬೆಂಗಳೂರು ಆಡಳಿತ ವಿಭಾಗದ ಡಿಸಿಪಿ ಆಗಿ ವರ್ಗಾವಣೆ ಮಾಡಲಾಗಿದೆ.

ಸುಧೀರ್ ಕುಮಾರ್ ರೆಡ್ಡಿ ಈ ಹಿಂದೆ ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಅವರನ್ನು ದಕ್ಷಿಣಕನ್ನಡ ಜಿಲ್ಲೆಗೆ ವರ್ಗ ಮಾಡಲು ರಾಜ್ಯ ಸರಕಾರ ಆದೇಶಿಸಿದೆ. ರಾಜ್ಯದಲ್ಲಿ ಒಟ್ಟು 6 ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಲು ಆದೇಶಿಸಿದೆ.

No Comments

Leave A Comment