Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ರವಿ ಬೆಳಗೆರೆಗೆ 1 ವರ್ಷ ಶಿಕ್ಷೆ ಪ್ರಕಟಿಸಿದ ಸ್ಪೀಕರ್‌

ಬೆಂಗಳೂರು: ಹಾಯ್‌ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಹಾಗೂ ಯಲಹಂಕ ವಾಯ್ಸ ಪತ್ರಿಕೆ ಸಂಪಾದಕ ಅನಿಲ್‌ ರಾಜ್‌ ಅವರಿಗೆ 1 ವರ್ಷ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಸ್ಪೀಕರ್‌ ಕೆ.ಬಿ. ಕೋಳಿವಾಡ ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ.

ಹಾಯ್‌ ಬೆಂಗಳೂರು ಪತ್ರಿಕೆ ಸಂಪಾದಕ ರವಿಬೆಳಗೆರೆ ಶಿರಗುಪ್ಪ ಶಾಸಕ ನಾಗರಾಜ್‌ ಹಾಗೂ ಕೆ.ಬಿ. ಕೋಳಿವಾಡ ವಿರುದ್ಧ ಅವಹೇಳನಕಾರಿಯಾಗಿ ಸುದ್ದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಹಕ್ಕು ಬಾಧ್ಯತಾ ಸಮಿತಿಯಲ್ಲಿ ಪತ್ರಿಕೆ ಸಂಪಾದಕರ ವಿರುದ್ಧ ದೂರು ನೀಡಿದ್ದರು. ಅವರ ದೂರಿನನ್ವಯ ಸಮಿತಿಯು ರವಿ ಬೆಳಗೆರೆ ಅವರಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸುವಂತೆ ಶಿಫಾರಸು ಮಾಡಿತ್ತು. ಸಮಿತಿಯ ಶಿಫಾರಸಿನಂತೆ ಅವರ ವಿರುದ್ಧ 1 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಬೇಕೆಂದು ಸದನದಲ್ಲಿ ಪಕ್ಷಭೇದ ಮರೆತು ಶಾಸಕರು ಒತ್ತಾಯ ಮಾಡಿದರು. ಸದನದ ಒಪ್ಪಿಗೆಯ ಹಿನ್ನೆಲೆಯಲ್ಲಿ ಸ್ಪೀಕರ್‌ ಕೆ.ಬಿ. ಕೋಳಿವಾಡ ಶಿಕ್ಷೆ ಘೋಷಿಸಿದರು. ಅದೇ ರೀತಿ ಯಲಹಂಕ ಶಾಸಕ ಎಸ್‌.ಆರ್‌. ವಿಶ್ವನಾಥ ವಿರುದ್ಧ ಯಲಹಂಕ ವಾಯ್ಸ ಪತ್ರಿಕೆಯಲ್ಲಿ ನಿರಂತರವಾಗಿ ಅವಹೇಳಕಾರಿಯಾಗಿ ವರದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಅವರ ವಿರುದ್ಧವೂ ಹಕ್ಕುಚ್ಯುತಿ ಮಂಡಿಸಿದ್ದರು.

ಕಿಮ್ಮನೆ ರತ್ನಾಕರ ಅಧ್ಯಕ್ಷತೆಯ ಹಕ್ಕು ಬಾಧ್ಯತಾ ಸಮಿತಿ ಯಲಹಂಕ ವಾಯ್ಸ ಪತ್ರಿಕೆ ಸಂಪಾದಕ ಅನಿಲ್‌ ರಾಜ್‌ ವಿರುದ್ಧ 1 ವರ್ಷ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸುವಂತೆ ಶಿಫಾರಸು ಮಾಡಿದ್ದರು. ಅದರಂತೆ ಕ್ರಮ ಕೈಗೊಳ್ಳುವಂತೆ ಶಾಸಕ ಎಸ್‌.ಆರ್‌. ವಿಶ್ವನಾಥ ಸದನದಲ್ಲಿ ಮನವಿ ಮಾಡಿದರು. ಪತ್ರಿಕೆ ಸಂಪಾದಕರು ಸದನವನ್ನೇ ಅವಮಾನಿಸುವ ರೀತಿಯಲ್ಲಿ ವರದಿ ಗಳನ್ನು ಪ್ರಕಟಿಸುತ್ತಿದ್ದಾರೆ. ಈ ರೀತಿಯ ಪತ್ರಕರ್ತರಿಂದ ಇಡೀ ಪತ್ರಕರ್ತರ ಸಮುದಾಯಕ್ಕೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಈ ರೀತಿಯ ಬ್ಲಾಕ್‌ ಮೇಲ್‌ ಮಾಡುವ ಪತ್ರಕರ್ತರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಅವರಿಗೆ ಪೂರಕವಾಗಿ ಸರಕಾರದ ಮುಖ್ಯ ಸಚೇತಕ ಅಶೊಕ್‌ ಪಟ್ಟಣ, ಕಿಮ್ಮನೆ ರತ್ನಾಕರ ಸಹಿತ ಅನೇಕ ಶಾಸಕರು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಶಾಸಕರ ಒಪ್ಪಿಗೆಯ ಹಿನ್ನೆಲೆಯಲ್ಲಿ ಸ್ಪೀಕರ್‌ ಕೋಳಿವಾಡ ಶಿಕ್ಷೆ ಪ್ರಕಟಿಸಿದರು.

No Comments

Leave A Comment