Log In
BREAKING NEWS >
ಅಮರನಾಥ ಯಾತ್ರೆ ವೇಳೆ ಕದನ ವಿರಾಮ ಮುಂದುವರೆಸಲು ಸರ್ಕಾರ ನಿರ್ಧಾರ: ಭದ್ರತಾ ಸಂಸ್ಥೆಗಳ ವಿರೋಧ....

ಚೀನಾದಲ್ಲಿ ಭೀಕರ ಭೂಕುಸಿತ; 100ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ!

ಬೀಜಿಂಗ್: ನೈರುತ್ಯ ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಕನಿಷ್ಛ 100 ಮಂದಿ ಜೀವಂತ ಸಮಾಧಿಯಾಗಿದ್ದಾರೆ ಎಂದು ಚೀನಾ ಮಾಧ್ಯಮ ವರದಿ ಮಾಡಿದೆ.

ನೈರುತ್ಯ ಚೀನಾದ ಸಿಚುವಾನ್ ಪ್ರಾಂತ್ಯದ ಕ್ಸಿನ್ ಮೋ ಗ್ರಾಮದ ಗುಡ್ಡು ಕುಸಿತ ಪರಿಣಾಮ ಅಲ್ಲಿದ್ದ ಸುಮಾರು 40ಕ್ಕೂ ಹೆಚ್ಚು ಮನೆಗಳು ಕುಸಿದಿವೆ. ಅಂತೆಯೇ ಅದರೊಳಗಿದ್ದ ಸುಮಾರು 100ಕ್ಕೂ ಅಧಿಕ ಮಂದಿ ಮಣ್ಣಿನ ಅವಶೇಷಗಳಡಿಯಲ್ಲಿ ಸಮಾಧಿಯಾಗಿದ್ದಾರೆ ಎಂದು ವರದಿಯಲ್ಲಿ  ತಿಳಿಸಲಾಗಿದೆ.

ಪ್ರಸ್ತುತ ವಿಚಾರ ತಿಳಿಯುತ್ತಿದ್ದಂತೆಯೇ ಚೀನಾದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಿಬ್ಬಂದಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸುಮಾರು 1 ಕಿ.ಮೀ ವರಗೂ ಮಣಿನ ರಾಶಿ ಕುಸಿದಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

No Comments

Leave A Comment