Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಪವಿತ್ರ ಮೆಕ್ಕಾ ಬಳಿ ಭಾರೀ ದಾಳಿ ವಿಫ‌ಲ;ಆತ್ಮಾಹುತಿ ದಾಳಿಕೋರ ಸ್ಫೋಟ

ರಿಯಾದ್‌: ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾದಲ್ಲಿ  ಭಾರೀ ದಾಳಿಯ ಸಂಚನ್ನು ಸೌದಿ ಅರೆಬೀಯಾದ ಭದ್ರತಾ ಪಡೆಗಳು ವಿಫ‌ಲಗೊಳಿಸಿದ್ದು , ಆತ್ಮಾಹುತಿ ದಾಳಿಕೋರ ತನ್ನನ್ನು ತಾನು ಸ್ಫೋಟಿಸಿಕೊಂಡ ಘಟನೆ ಶುಕ್ರವಾರದ ಪ್ರಾರ್ಥನೆ ವೇಳೆ ನಡೆದಿದೆ.

ಮೆಕ್ಕಾಕ್ಕೆ ಬಂದ ಯಾತ್ರಾರ್ಥಿಗಳನ್ನು ಗುರಿಯಾಗಿರಿಸಿಕೊಂಡು ಭಾರೀ ದಾಳಿಗೆ ಸಿದ್ಧವಾಗಿ ಮನೆಯೊಂದರಲ್ಲಿ ಅಡಗಿದ್ದ ಉಗ್ರನ ಮೇಲೆ ಭದ್ರತಾ ಪಡೆಗಳು ದಾಳಿ ನಡೆಸಿ ಗುಂಡಿನ ಚಕಮಕಿ ನಡೆಸಿದ್ದಾರೆ. ಈ ವೇಳೆ ಉಗ್ರ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಪರಿಣಾಮವಾಗಿ ಐವರು ಭದ್ರತಾ ಸಿಬಂದಿಗಳು ಮತ್ತು  6 ಮಂದಿ ಒತ್ತೆಯಾಳುಗಳಾಗಿ ಇರಿಸಿಕೊಂಡ ವಿದೇಶಿ ಯಾತ್ರಿಗಳು  ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಯ ಬಳಿಕ ಓರ್ವ ಮಹಿಳೆ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಮೆಕ್ಕಾ, ಮತ್ತು ಜೆಡ್ಡಾದಲ್ಲಿ ಹೈಅಲರ್ಟ್‌ ಘೋಷಿಸಲಾಗಿದೆ.

No Comments

Leave A Comment