Log In
BREAKING NEWS >
ನಾಡಿನ ಸಮಸ್ತ ಜನತೆಗೆ,ಓದುಗರಿಗೆ,ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ಬಳಗದ ಯುಗಾದಿ ಹಬ್ಬದ ಶುಭಾಶಯಗಳು.......ಮಾರ್ಚ್ 23 ರಿಂದ ಏಪ್ರಿಲ್ 6 ವರಗೆ SSLC ಪರೀಕ್ಷೆ ನಡೆಯಲಿದೆ. ಪರೀಕ್ಷೆ ದಿನಾ ಬೆಳಿಗ್ಗೆ 9 ರಿಂದ 1:30 ರ ವರೆಗೆ ನಡೆಯಲಿದೆ........ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ

ಮಸಣವಾದ ಮದುವೆ ಮನೆ : ಓಕ್ಲಾದಲ್ಲಿ ಸಿಲಿಂಡರ್‌ ಸ್ಫೋಟಕ್ಕೆ 5 ಬಲಿ

ಹೊಸದಿಲ್ಲಿ: ದಕ್ಷಿಣ ದೆಹಲಿಯ ಓಕ್ಲಾ ಪ್ರದೇಶದ ಮದುವೆ ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಐವರು ದಾರುಣವಾಗಿ ಸಾವನ್ನಪ್ಪಿ, 9 ಮಂದಿ ಗಂಭೀರವಾಗಿ ಗಾಯಗೊಂಡ ಭೀಕರ ಅವಘಡ ಸೋಮವಾರ ರಾತ್ರಿ ಸಂಭವಿಸಿದೆ.

ನಾಳೆ ಗುರುವಾರ ನಿಗದಿಯಾಗಿದ್ದ ಮದುವೆ ಸಮಾರಂಭಕ್ಕಾಗಿ ನೆಂಟರಿಷ್ಟರು ಸೇರಿದ್ದ ವೇಳೆ ಅವಘಡ ಸಂಭವಿಸಿದೆ. ಮೃತರಲ್ಲಿ ಮೂವರು ಮಹಿಳೆಯರು, ಮಗು ಮತ್ತು ಓರ್ವ ಪುರುಷ ಸೇರಿದ್ದಾರೆ. ಗಾಯಾಳುಗಳನ್ನು ಇಎಸ್‌ಐ ಮತ್ತು ಸಫ್ದರ್‌ಜಂಗ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಬ್ಬರು ಸ್ಥಳದಲ್ಲೇ ಸಜೀವ ದಹನಗೊಂಡರೆ, ಗಂಭೀರವಾಗಿ ಸುಟ್ಟ ಗಾಯಗಳಿಗೊಳಗಾಗಿದ್ದ ಮೂವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕರೆ ಮಾಡಿದ 45 ನಿಮಷಗಳ ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿ ನಂದಿಸಿದ್ದಾರೆ.

 

No Comments

Leave A Comment