Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷಗಳ ಅಭ್ಯರ್ಥಿ ಮೀರಾ ಕುಮಾರ್ ನಾಮಪತ್ರ ಸಲ್ಲಿಕೆ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಲೋಕಸಭಾ ಮಾಜಿ ಸ್ಪೀಕರ್ ಮೀರಾ ಕುಮಾರ್ ಅವರು ಬುಧವಾರ ನಾಮಪತ್ರ ಸಲಿಸಿದರು.

ಇಂದು ಬೆಳಗ್ಗೆ ಸಂಸತ್ತಿಗೆ ಬಂದ ಮೀರಾ ಕುಮಾರ್ ಅವರು ಲೋಕಸಭಾ ಕಾರ್ಯದರ್ಶಿಯವರಿಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ವೇಳೆ ಮೀರಾ ಕುಮಾರ್ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಎನ್’ಸಿಪಿ ಮುಖಂಡ ಶರದ್ ಪವಾರ್, ಸಿಪಿಎಂ ಮುಖಂಡ ಸೀತಾರಾಂ ಯೆಚೂರಿ, ಪಂಜಾಬ್ ಸಿಎಂ ಅಮರೀಂದರ್ ಸಿಂಗ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಒಟ್ಟು 17 ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಮೀರಾಕುಮಾರ್ ಅವರು ರಾಜ್ ಘಾಟ್’ಗೆ ತೆರಳಿ ಮಹಾತ್ಮ ಗಾಂಧಿಯವರ ಸಮಾಧಿಗೆ ನಮನ ಸಲ್ಲಿಸಿದರು. ರಾಷ್ಟ್ರಪತಿ ಚುನಾವಣೆ ಜುಲೈ.17ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದೆ. ಚುನಾವಣೆಯಲ್ಲಿ ಮೀರಾ ಕುಮಾರ್ ಮತ್ತು ಎನ್ ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರ ನಡುವೆ ನೇರ ಹಣಾಹಣಿ ನಿರೀಕ್ಷಿಸಲಾಗಿದೆ.

No Comments

Leave A Comment