Log In
BREAKING NEWS >
ನವೆ೦ಬರ್ 24ರಿ೦ದ ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 89ನೇ ಭಜನಾ ಸಪ್ತಾಹ ಆರ೦ಭಗೊಳ್ಳಲಿದೆ-ಡಿಸೆ೦ಬರ್ 1ಕ್ಕೆ ಭಜನಾ ಸಪ್ತಾಹದ ಮ೦ಗಲೋತ್ಸವ ಜರಗಲಿದೆ....

ಪಾಕ್‌ ಪಡೆಗಳಿಂದ ಶೆಲ್‌ ದಾಳಿ:ಇಬ್ಬರು ಬಿಎಸ್‌ಎಫ್ ಯೋಧರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿನಿಯಂತ್ರಣ ರೇಖೆಯ ಪೂಂಛ್  ಸೆಕ್ಟರ್‌ನಲ್ಲಿ ಪಾಕಿಸ್ತಾನ ಪಡೆಗಳು ಪುಂಡಾಟ ಮುಂದುವರಿಸಿದ್ದು ಗುರುವಾರ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ಬಿಎಸ್‌ಎಫ್ ಯೋಧರು ಗಾಯಗೊಂಡಿದ್ದಾರೆ.

ಗುರುವಾರ ಬೆಳಗ್ಗೆ 1.30 ರ ವೇಳೆ ಪಾಕ್‌ ಪಡೆಗಳು ಸಣ್ಣ ಶಸ್ತ್ರಾಸ್ತ್ರಗಳು , ಮೋರ್ಟಾರ್‌ಗಳು ಮತ್ತು ಗುಂಡಿನ ಮಳೆ ಸುರಿಸಿ  ಅಪ್ರಚೋದಿತ ದಾಳಿ ಅರಂಭಿಸಿದ್ದು, ಇದಕ್ಕೆ ಭಾರತೀಯ ಯೋಧರು ತಕ್ಕ ಪ್ರತ್ಯುತ್ತರ ನೀಡಿರುವುದಾಗಿ ರಕ್ಷಣ ಸಚಿವಾಲಯದ ಮೂಲಗಳು ತಿಳಿಸಿವೆ.

ಶೆಲ್‌ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯೋಧರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

No Comments

Leave A Comment