Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಗೋ ರಕ್ಷಣೆ ಹೆಸರಿನಲ್ಲಿ ಜನರನ್ನು ಕೊಲ್ಲುವುದನ್ನು ಒಪ್ಪಲಾಗದು: ಮೋದಿ

ಅಹಮದಾಬಾದ್‌: ದೇಶಾದ್ಯಂತ ಗೋವಿನ ಹೆಸರಿನಲ್ಲಿ ನೆಡೆಯುತ್ತಿರುವ ಹಿಂಸಾಚಾರಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಗುರುವಾರ ಮೌನ ಮುರಿದಿದ್ದು, ಗೋವಿನ ರಕ್ಷಣೆ ಹೆಸರಿನಲ್ಲಿ ಮನುಷ್ಯರನ್ನು ಕೊಲ್ಲುವುದು ತಪ್ಪು ಎಂದು ಸ್ವಯಂಘೋಷಿತ ಗೋರಕ್ಷಕರಿಗೆ ಎಚ್ಚರಿಕೆ ನೀಡಿದ್ದಾರೆ.

ಸಾಬರಮತಿ ಆಶ್ರಮದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ‘ನಮ್ಮ ದೇಶ ಮಹಾತ್ಮ ಗಾಂಧೀಜಿ ಅವರ ಕನಸಿನ ದೇಶ. ಇಲ್ಲಿ ಯಾರೊಬ್ಬರಿಗೂ ಕಾನೂನು ಕೈಗೆ ತೆಗೆದುಕೊಳ್ಳುವ ಹಕ್ಕು ಇಲ್ಲ .ಹಿಂಸೆಯಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದರು.

ಗೋವುಗಳ ರಕ್ಷಣೆ  ಆಗಲೇಬೇಕಿದೆ.ಮಹಾತ್ಮ ಗಾಂಧೀಜಿ ಮತ್ತು ಆಚಾರ್ಯ ವಿನೋಬಾ ಭಾವೆ ಅವರೂ ಗೋವುಗಳನ್ನು ರಕ್ಷಿಸಲು ಕರೆ ನೀಡಿದ್ದರು.ಆದರೆ ರಕ್ಷಣೆ ಹೆಸರಲ್ಲಿ ಯಾರೊಬ್ಬರನ್ನೂ ಕೊಲ್ಲಲು ಮಹಾತ್ಮರು ಹೇಳಿಲ್ಲ ಎಂದರು.

No Comments

Leave A Comment