Log In
BREAKING NEWS >
ಗೋಶಾಲೆಯಲ್ಲಿ 200 ಹಸುಗಳ ಸಾವು ಪ್ರಕರಣ: ಬಿಜೆಪಿ ಮುಖಂಡ ಬಂಧನ....ಉಗ್ರರು ಒಳ ನಸುಳಿರುವ ಶಂಕೆ: ಶೋಪಿಯಾನ್ ಜಿಲ್ಲೆಯ 9 ಗ್ರಾಮಗಳಲ್ಲಿ ತೀವ್ರ ಸೇನಾ ಶೋಧ....

ಸ್ಕೂಲ್‌ ಬಸ್‌ನಲ್ಲೇ UKG ಮಗುವಿನ ಮೇಲೆರಗಿದ ಕಾಮಾಂಧ ಚಾಲಕ

ಬೆಂಗಳೂರು: ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಅಮಾನವೀಯ, ಅತ್ಯಂತ ಹೇಯ ಘಟನೆ ನಗರದಲ್ಲಿ ನಡೆದಿದ್ದು, ಸ್ಕೂಲ್‌ ಬಸ್‌ನಲ್ಲಿ ಯುಕೆಜಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಬಸ್‌ ಚಾಲಕ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಪ್ರಕರಣ ದಾಖಲಾಗಿದೆ.

ಬಂಡೇ ಪಾಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದ್ದು, ಪ್ರತಿಷ್ಠಿತ ಶಾಲೆಯ ಸ್ಕೂಲ್‌ ವ್ಯಾನ್‌ನಲ್ಲಿ ಸೋಮವಾರ ಸಂಜೆ ಘಟನೆ ನಡೆದಿದ್ದು,ಮಗು ಪೋಷಕರ ಬಳಿ ಕಾಮುಕನ ಕೃತ್ಯದ ಬಗ್ಗೆ ಹೇಳಿಕೊಂಡಿದೆ.

ಪೊಲೀಸರಿಗೆ ದೂರು ನೀಡಲಾಗಿದ್ದು, ದೂರಿನನ್ವಯ ಬಸ್‌ ಚಾಲಕ ಒಡಿಶಾ ಮೂಲದ ಅಶುತೋಷ್‌ ಎಂಬಾತನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

No Comments

Leave A Comment