Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರೀಶಾರದಾ ಮಹೋತ್ಸವ ಸಮಿತಿಯ ಆಶ್ರಯದಲ್ಲಿ ಪೂಜಿಸಲ್ಪಟ್ಟ ಶ್ರೀಶಾರದಾ ವಿಗ್ರಹ ಇ೦ದು ವಿಸರ್ಜನಾ ಮೆರವಣಿಗೆಗೆ ಸಕಲ ಸಿದ್ದತೆ........ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಜಮ್ಮು ಕಾಶ್ಮೀರ: ಜಿಎಸ್‌ಟಿ ಜಾರಿ ವಿರೋಧಿಸಿ ವ್ಯಾಪಾರಿಗಳ ಪ್ರತಿಭಟನೆ, ಹಲವರ ಬಂಧನ

ಶ್ರೀನಗರ: ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ವ್ಯವಸ್ಥೆ ಜಾರಿಗೊಳಿಸುವುದನ್ನು ವಿರೋಧಿಸಿ ಜಮ್ಮು ಕಾಶ್ಮೀರ ವಿಧಾನಸಭೆಯತ್ತ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ತಡೆದಿರುವ ಪೊಲೀಸರು ಹಲವರನ್ನು ಬಂಧಿಸಿದ್ದಾರೆ.

ರಾಜ್ಯದಲ್ಲಿ ಜಿಎಸ್‌ಟಿ ಅನುಷ್ಠಾನದ ಬಗ್ಗೆ ಮಂಗಳವಾರ ವಿಶೇಷ ಅಧಿವೇಶನ ಕರೆದಿದ್ದು, ಚರ್ಚೆ ಆರಂಭಿಸಲಾಗಿದೆ. ಇದರ ಬೆನ್ನಲ್ಲೇ ವ್ಯಾಪಾರಿಗಳು ಜಿಎಸ್‌ಟಿ ಜಾರಿ ವಿರೋಧಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

ಪ್ರತಿಭಟನಾಕಾರರು ವಿಧಾನಸಭೆಯತ್ತ ನುಗ್ಗಲು ಮುಂದಾಗಿದ್ದಾರೆ. ಈ ವೇಳೆ ಅವರನ್ನು ತಡೆದ ಪೊಲೀಸರು ಇಲ್ಲಿನ ನಾಗರಿಕ ಸಚಿವಾಲಯದ ಸಂಕೀರ್ಣದ ಗೇಟ್‌ ಬಳಿ ಬಂಧಿಸಿದ್ದಾರೆ.

ರಾಜ್ಯದಲ್ಲಿ ಹೊಸ ತೆರಿಗೆ ನೀತಿಯನ್ನು ಅನುಷ್ಠಾನಗೊಳಿಸುವುದು ರಾಜ್ಯದ ವಿಶೇಷ ಸ್ಥಾನ ಮತ್ತು ಅದರ ಹಣಕಾಸಿನ ಸ್ವಾಯತ್ತತೆಯನ್ನು ಕಿತ್ತುಕೊಳ್ಳಲಿದೆ ಎಂದು ವ್ಯಾಪಾರಿಗಳು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಕಪ್ಪು ಧ್ವಜಗಳನ್ನು ಹಿಡಿದ ಪ್ರತಿಭಟನಾನಿರತರು ಜಿಎಸ್‌ಟಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಇಲ್ಲಿನ ಜಹಾಂಗೀರ್‌ ಚೌಕದ ವರೆಗೆ ಮೆರವಣಿಗೆ ನಡೆಸಿದರು. ಬಳಿಕ, ನಾಗರಿಕ ಸಚಿವಾಲಯದ ಸಂಕೀರ್ಣದತ್ತ ನುಗ್ಗಲು ಯತ್ನಿಸಿದರು. ಆದರೆ, ಅವರನ್ನು ತಡೆದ ಪೊಲೀಸರು, ಸಚಿವಾಲಯದ ಹೊರಗೆ ಬಂಧಿಸಿದರು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

No Comments

Leave A Comment