Log In
BREAKING NEWS >
20ರಿ೦ದ 24ರವರೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ವರ್ಷ೦ಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.....ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಪುನಾ– ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಹುಬ್ಬಳ್ಳಿ ಬಳಿ ಕೆರೆಗೆ ಉರುಳಿದ ಬಸ್: 30 ಪ್ರಯಾಣಿಕರು ಅಪಾಯದಿಂದ ಪಾರು

ಹುಬ್ಬಳ್ಳಿ: ನಗರದ ಹೊರವಲಯದ ಪುನಾ– ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವರೂರ ಕ್ರಾಸ್ ಬಳಿ ಮಾಜಿ ಸಚಿವ ಬಸವರಾಜ ಹೊರಟ್ಟಿ ಪಾರ್ಮ್ ಹೌಸ್‌ನ ಕೆರೆಗೆ ಖಾಸಗಿ ಬಸ್‌ ಉರುಳಿ ಬಿದ್ದಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಬಸ್‌ ಬೆಂಗಳೂರಿನಿಂದ ಮುಂಬೈಗೆ ಹೊರಟಿತ್ತು. ಬಸ್‌ನಲ್ಲಿದ್ದ 30 ಪ್ರಯಾಣಿಕರಲ್ಲಿ ಹಲರಿಗೆ ಸಣ್ಣ ಪುಟ್ಟಗಾಯ ಗಾಯಗಳಾಗಿವೆ.

ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅವಘಡ ಸಂಭವಿಸಿದ್ದು, ದೊಡ್ಡ ಪ್ರಮಾಣದ ದುರಂತವೊಂದು ತಪ್ಪಿದೆ.

ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

No Comments

Leave A Comment