Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಬಂಟ್ವಾಳ ಠಾಣೆಯಲ್ಲಿ ಸಂಸದರಾದ ಶೋಭಾ,ನಳಿನ್‌ ವಿರುದ್ಧ FIR ದಾಖಲು

ಬಂಟ್ವಾಳ: ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ ಮಡಿವಾಳ ಹತ್ಯೆ ಯತ್ನ ಖಂಡಿಸಿ ಶುಕ್ರವಾರ ಬಂಟ್ವಾಳದಲ್ಲಿ ನಿಷೇಧಾಜ್ಞೆಯ ನಡುವೆಯೂ ಪ್ರತಿಭಟನೆ ನಡೆಸಿದ್ದಕ್ಕಾಗಿ ಸಂಸದೆ ಶೋಭಾ ಕರಂದ್ಲಾಜೆ ಮತ್ತು ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಎಫ್ಐಆರ್‌ ದಾಖಲಿಸಲಾಗಿದೆ.

ಸಾವಿರಾರು ಜನರು ಭಾಗಿಯಾಗಿದ್ದ ಪ್ರತಿಭಟನೆಯಲ್ಲಿ  ಸಂಸದರಿಬ್ಬರು ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದರು. ಐಪಿಸಿ ಸೆಕ್ಷನ್‌ 143 ,149 ಮತ್ತು ವಿವಿಧ ಸೆಕ್ಷನ್‌ಗಳ ಅಡಿ ಎಫ್ಐಆರ್‌ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಬಿ.ಸಿ.ರೋಡ್‌ನ‌ಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ  ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ಮಡಿವಾಳ (28) ಶುಕ್ರವಾರ ರಾತ್ರಿ  ಕೊನೆಯುಸಿರೆಳೆದಿದ್ದಾರೆ.

No Comments

Leave A Comment