Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಕದನ ವಿರಾಮ ಉಲ್ಲಂಘಿಸಿದ ಪಾಕ್; ಇಬ್ಬರು ನಾಗರಿಕರ ಸಾವು, ಮೂವರು ಸೈನಿಕರಿಗೆ ಗಾಯ

ಶ್ರೀನಗರ: ಪಾಕಿಸ್ತಾನ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘಿಸಿ ಭಾರತೀಯ ಪೋಸ್ಟ್ ಗಳತ್ತ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ನಾಗರಿಕರು ಹಾಗೂ ಮೂವರು ಭಾರತೀಯ ಸೈನಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಗಡಿ ನಿಯಂತ್ರಣ ರೇಖೆ ಪೂಂಛ್ ಸೆಕ್ಟರ್ ಬಳಿ ಪಾಕಿಸ್ತಾನ ಸೈನಿಕರು ಗುಂಡಿನ ದಾಳಿ ನಡೆಸಿದ ಪರಿಣಾಮ ಸ್ಥಳೀಯ ದಂಪತಿಗಳಿಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಎಲ್ ಒಸಿ ಬಳಿಯ ಗುಲ್ಪುರಾ ಬಳಿ ಈ ದಾಳಿ  ನಡೆದಿದ್ದು, ಪಾಕಿಸ್ತಾನ ಸೈನಿಕರ ದಾಳಿಗೆ ಭಾರತೀಯ ಯೋಧರು ದಿಟ್ಟ ಉತ್ತರ ನೀಡುತ್ತಿದ್ದಾರೆ.

ಏತನ್ಮಧ್ಯೆ ಬಂಡಿಪೋರಾದ ಹಾಜಿನ್‌ ಪ್ರದೇಶದಲ್ಲಿರುವ ಸೇನಾ ನೆಲೆಯ ಮೇಲೆ ಶನಿವಾರ ಬೆಳಗ್ಗೆ ಉಗ್ರರು ಕೂಡ ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಭದ್ರತಾ ಪಡೆಗಳು ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರೆಸಲಾಗಿದ್ದು, ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದೆ.

No Comments

Leave A Comment