Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಪಶ್ಚಿಮ ಬಂಗಾಳ ಕೋಮುಗಲಭೆ: ಬಿಜೆಪಿ ನಾಯಕಿ ರೂಪ ಗಂಗೂಲಿ ಬಂಧನ

ಕೋಲ್ಕತ್ತಾ: ಫೇಸ್ ಬುಕ್ ನಲ್ಲಿ ಧಾರ್ಮಿಕ ನಿಂಧನೆ ಪೋಸ್ಟ್ ಹಾಕಿದ್ದರಿಂದ ಪಶ್ಚಿಮ ಬಂಗಾಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಕೋಮುಗಲಭೆ ಪೀಡಿತ ಪ್ರದೇಶಕ್ಕೆ ತೆರಳುತ್ತಿದ್ದ ಬಿಜೆಪಿ ನಾಯಕಿ ರೂಪ ಗಂಗೂಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕೋಮುಗಲಭೆ ಹಿನ್ನೆಲೆ ಬದುರಿಯಾಗೆ ತೆರಳದಂತೆ ಬಿಜೆಪಿ, ಎಡ ಪಕ್ಷಗಳು ಮತ್ತು ಕಾಂಗ್ರೆಸ್ ನಾಯಕರಿಗೆ ನಿರ್ಬಂಧ ವಿಧಿಸಲಾಗಿತ್ತು. ಹೀಗಿದ್ದರು ನಟಿ ಸೂಕ್ಷ್ಮ ಸ್ಥಳಕ್ಕೆ ತೆರಳುತ್ತಿದ್ದರಿಂದ ರೂಪಾ ಗಂಗೂಲಿ ಸೇರಿದಂತೆ 20ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

ಈ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವುದರಿಂದ ಯಾವುದೇ ರಾಜಕೀಯ ಪಕ್ಷಗಳ ನಿಯೋಗ ಅಲ್ಲಿಗೆ ತೆರಳುವುದನ್ನು ನಿಷೇಧಿಸಲಾಗಿದೆ.

No Comments

Leave A Comment