Log In
BREAKING NEWS >
ಉಡುಪಿಯ ಹಲವು ಕಡೆಗಳಲ್ಲಿ ಕೈ ಕೊಟ್ಟ ಮತಯ೦ತ್ರ-ಮತದಾನಕ್ಕೆ ಪರದಾಟುವ ಪರಿಸ್ಥಿತಿ....

ಶರತ್‌ ನಿವಾಸಕ್ಕೆ ಬಿಎಸ್‌ವೈ ಭೇಟಿ: ಕಣ್ಣೀರಿಟ್ಟ ತಂದೆ ತಾಯಿ

ಬಂಟ್ವಾಳ : ಬಿ.ಸಿ.ರೋಡ್‌ನ‌ಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ ಮಡಿವಾಳ ಅವರ ಸಜೀಪ ಪಡ್ಪು ನಿವಾಸಕ್ಕೆ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಶರತ್‌ ತಂದೆ ತಾಯಿಗೆ ಯಡಿಯೂರಪ್ಪ ಅವರು ಸಮಧಾನ ಹೇಳಿ ನಿಮ್ಮೊಂದಿಗೆ ನಾವಿದ್ದೇವೆ ಎಂದರು. ಈ ವೇಳೆ ಶರತ್‌ ತಂದೆ,ತಾಯಿ ಮಗನನ್ನು ನೆನೆದು ಕಣ್ಣೀರಿಟ್ಟರು.

ಭೇಟಿ ವೇಳೆ ಆರ್‌ಎಸ್‌ಎಸ್‌ ಮುಖಂಡ ಪ್ರಭಾಕರ್‌ ಭಟ್‌, ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ನಾಗರಾಜ್‌ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಮಂಗಳೂರಿನಲ್ಲಿ ಪ್ರತಿಭಟನಾ ಸಭೆ 

ಮಹಿಳಾ ಮೋರ್ಚಾ ವತಿಯಿಂದ ಮಂಗಳೂರಿನಲ್ಲಿ ಶರತ್‌ ಹತ್ಯೆ ಖಂಡಿಸಿ ಪ್ರತಿಭಟನಾ ಸಭೆ ನಡೆಸಲಾಗುತ್ತಿದ್ದು ಯಡಿಯೂರಪ್ಪ ಅವರು ಭಾಗಿಯಾಗಿದ್ದಾರೆ.

No Comments

Leave A Comment