Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಬೆನ್ನಿಗಾನಹಳ್ಳಿ ಡಿನೋಟಿಫಿಕೇಶನ್‌: BSY,ಡಿಕೆಶಿಗೆ ಬಿಗ್‌ ರಿಲೀಫ್

 

ಹೊಸದಿಲ್ಲಿ : ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ  ಮತ್ತು ಇಂಧನ ಸಚಿವ  ಡಿ.ಕೆ. ಶಿವಕುಮಾರ್ ಅವರಿಗೆ ಬಿಗ್‌ ರಿಲೀಫ್ ಎಂಬಂತೆ ಬೆನ್ನಿಗಾನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣವನ್ನು ಸುಪ್ರೀಂಕೋರ್ಟ್‌ ಶುಕ್ರವಾರ ರದ್ದುಗೊಳಿಸಿದೆ.

ಪ್ರಕರಣವನ್ನು ರದ್ದು ಮಾಡಿ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿದೆ.

ಪ್ರಕರಣದ ವಿವರ
ಬೆಂಗಳೂರು ಪೂರ್ವ ತಾಲೂಕು ಕೆ.ಆರ್.ಪುರ ಹೋಬಳಿಯ ಬೆನ್ನಿಗಾನಹಳ್ಳಿಯಲ್ಲಿನ ಸರ್ವೆ ನಂ.50/2ರಲ್ಲಿನ 4 ಎಕರೆ 20 ಗುಂಟೆ ಜಮೀನನ್ನು ಡಿ.ಕೆ. ಶಿವಕುಮಾರ್ ನಗರಾಭಿವೃದ್ಧಿ ಸಚಿವರಾಗಿದ್ದಾಗ ಖರೀದಿಸಿದ್ದರು. ನಂತರ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಎಲ್ಲ ದಾಖಲೆಗಳನ್ನು ಕಂದಾಯ ಇಲಾಖೆಯ ಅಧಿಕಾರಿಗಳಿಂದ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದರು. ಬಳಿಕ ಯಡಿಯೂರಪ್ಪ ತಮ್ಮ ಅಧಿಕಾರಾವಧಿಯಲ್ಲಿ ಡಿ.ಕೆ.ಶಿವಕುಮಾರ್ ಅವರ ಮನವಿ ಮೇರೆಗೆ ಈ ಜಾಗವನ್ನು ಅಕ್ರಮವಾಗಿ ಡಿ ನೋಟಿಫಿಕೇಷನ್ ಮಾಡಿಸಿದ್ದಾರೆ ಎಂದು ಆರೋಪಿಸಿ ಟಿ.ಜೆ. ಅಬ್ರಾಹಾಂ ಮತ್ತು ಕಬ್ಬಾಳೆಗೌಡ ಎಂಬುವರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

No Comments

Leave A Comment