Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಆರು ತಿಂಗಳಲ್ಲಿ 15 ಜನ ಬಲಿ ಎಚ್‌1ಎನ್‌1­ಗೆ 15 ಬಲಿ

ಬೆಂಗಳೂರು: ರಾಜ್ಯದಲ್ಲಿ ಕಾಣಿಸಿಕೊಂಡಿರುವ ಎಚ್‌1ಎನ್‌1 ಜ್ವರ ಕೇವಲ ಆರು ತಿಂಗಳಲ್ಲಿ 15 ಜನರನ್ನು ಬಲಿತೆಗೆದುಕೊಂಡಿದ್ದು, ತೀವ್ರ ಆತಂಕಕ್ಕೆ  ಕಾರಣವಾಗಿದೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಹಾವೇರಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ  ಜಿಲ್ಲೆಯಲ್ಲಿ ಈ ಸೋಂಕು  ಕಾಣಿಸಿಕೊಂಡಿದೆ.

ಪ್ರಸಕ್ತ ಸಾಲಿನಲ್ಲಿ ಈವರೆಗೆ 2,429 ಜನ ಈ ಜ್ವರದಿಂದ ಬಳಲಿದ್ದಾರೆ. ಕಳೆದ ವರ್ಷ 110 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು  ಯಾರೂ ಸಾವಪ್ಪಿರಲಿಲ್ಲ.

ವೈರಸ್‌ಗಳಿಂದ ಹರಡುವ ಸೋಂಕು ಇದಾಗಿದ್ದು, ಮೊದಲಿಗೆ ಶೀತ ಮತ್ತು ಜ್ವರ ಕಾಣಿಸಿಕೊಳ್ಳುತ್ತದೆ. ರೋಗ ಉಲ್ಬಣವಾದರೆ ಉಸಿರಾಟದ ತೊಂದರೆ ಉಂಟಾಗಿ ಸಾವು ಸಂಭವಿಸುವ ಸಾಧ್ಯತೆ ಇರುತ್ತದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

‘ ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರಿಗಾಗಿ ಪ್ರತ್ಯೇಕ ವಾರ್ಡ್‌ಗಳನ್ನು ತೆರೆದು ಚಿಕಿತ್ಸೆ ನೀಡಲಾಗುತ್ತಿದೆ. ಈ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಆರೋಗ್ಯ ಇಲಾಖೆ ನಿರ್ದೇಶಕ ಡಾ. ಪಿ. ಎಲ್‌. ನಟರಾಜ್ ತಿಳಿಸಿದ್ದಾರೆ.

No Comments

Leave A Comment