Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ

ದೇಶಾದ್ಯಂತ ರಾಷ್ಟ್ರಪತಿ ಚುನಾವಣೆಗೆ ಮತದಾನ ಆರಂಭ!

ನವದೆಹಲಿ: ಬಹು ನಿರೀಕ್ಷಿತ ರಾಷ್ಟ್ರಪತಿ ಚುನಾವಣೆಗೆ ದೇಶಾದ್ಯಂತ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ದೆಹಲಿಯಲ್ಲಿ ಮತದಾನ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ಹಾಗೂ ಎನ್ ಡಿಎ ಅಭ್ಯರ್ಥಿ ರಾಮನಾಥ ಕೋವಿಂದ್ ಅವರ ನಡುವೆ ಜಿದ್ದಾ ಜಿದ್ದಿನ ಪೈಪೋಟಿ ನಿರೀಕ್ಷಿಸಲಾಗತ್ತಿದ್ದು, ಜುಲೈ 20ರಂದು ಫಲಿತಾಂಶ ಪ್ರಕಟವಾಗಲಿದೆ.71 ವರ್ಷದ ರಾಮನಾಥ ಕೋವಿಂದ ಉತ್ತಮ ನಾಯಕರೆಂಬ ವರ್ಚಸ್ಸು ಹೊಂದಿದ್ದಾರೆ. ಕಾನೂನು ಮತ್ತು ಸಂವಿಧಾನದಲ್ಲಿ ಪಾಂಡಿತ್ಯ ಹೊಂದಿರುವ ಕೋವಿಂದ್, ದಲಿತ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಎರಡು ಬಾರಿ  ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲುಂಡಿದ್ದ ಇವರು, ಈ ಹಿಂದೆ ಬಿಹಾರದ ರಾಜ್ಯಪಾಲರಾಗಿದ್ದರು. ಇನ್ನು ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ಅವರ ವಿಚಾರಕ್ಕೆ ಬರುವುದಾದರೆ ಬಿಹಾರದಲ್ಲಿ ಜನಿಸಿದ ಮೀರಾ ಕುಮಾರ್ (72) ಸರಳ  ಹಾಗೂ ಸೌಜನ್ಯದ ವ್ಯಕ್ತಿತ್ವ ಹೊಂದಿದ್ದಾರೆ. ಉತ್ತಮ ನಾಯಕಿಯಾಗಿ ವರ್ಚಸ್ಸು ಪಡೆದಿದ್ದಾರೆ.

ಲೋಕಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಮೀರಾ ಕುಮಾರ್ ಅವರು ಇಂಡಿಯನ್ ಫಾರಿನ್ ಸರ್ವಿಸ್​ನಲ್ಲಿ  ಸೇವೆ ಸಲ್ಲಿಸಿದ್ದರಿಂದ ವಿದೇಶ ನೀತಿಗಳ ಬಗ್ಗೆ ಅರಿವು ಹೊಂದಿದ್ದಾರೆ.ದಲಿತ ನಾಯಕಿಯಾಗಿಯೂ ಮೀರಾ ಕುಮಾರ್ ಅವರು ಗುರುತಿಸಿಕೊಂಡಿದ್ದು, ಉಪಪ್ರಧಾನಿಯಾಗಿದ್ದ ಜಗಜೀವನರಾಮ್ ಅವರ ಮಗಳು ಎಂಬುದು ಮತ್ತೊಂದು ಹಿರಿಮೆ. ರಾಮವಿಲಾಸ್ ಪಾಸ್ವಾನ್ ಮತ್ತು ಮಾಯಾವತಿಯಂಥ  ದಿಗ್ಗಜ ನಾಯಕರಿಗೆ ಮೀರಾ ಕುಮಾರ್ ಅವರು ಚುನಾವಣೆಯಲ್ಲಿ ಸೋಲಿನ ರುಚಿ ಉಣಿಸಿದ್ದಾರೆ. ಕರೋಲ್​ಬಾಗ್ ಕ್ಷೇತ್ರದಿಂದ 3 ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ.

ವಿಧಾನಸೌಧದಲ್ಲೂ ಮತದಾನ ಪ್ರಕ್ರಿಯೆ ಆರಂಭಇತ್ತ ಕರ್ನಾಟಕದಲ್ಲೂ ರಾಷ್ಟ್ರಪತಿ ಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಮೂಲಗಳ ಪ್ರಕಾರ ಈಗಾಗಲೇ ಶಾಸಕರಾದ  ಸಿಟಿರವಿ, ಆನಂದ್ ಸಿಂಗ್ ಸೇರಿದಂತೆ ಹಲವು ಮತದಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮತದಾನ ಪ್ರಕ್ರಿಯೆ ಸಂಜೆ 5 ಗಂಟೆಯವರೆಗೂ ನಡೆಯಲಿದೆ.

No Comments

Leave A Comment