Log In
BREAKING NEWS >
ಉಡುಪಿಯ ಶ್ರೀಶಿರೂರು ಶ್ರೀಗಳು ಹರಿಪಾದಕ್ಕೆ-ಇನ್ನಿಲ್ಲವಾದರು ಶ್ರೀಗಳು-ಉಡುಪಿಯ ಶ್ರೀಕೃಷ್ಣಮಠ ಹಾಗೂ ಶಿರೂರು ಮಠಕ್ಕೆ ಬಿಗುಭದ್ರತೆ

ಪಾಕ್ ಗುಂಡಿನ ದಾಳಿಗೆ ಯೋಧ ಹುತಾತ್ಮ, 7 ವರ್ಷದ ಬಾಲಕಿ ಬಲಿ

ನವದೆಹಲಿ: ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು, ಘಟನೆಯಲ್ಲಿ 7ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಸೋಮವಾರ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.

ರಜೌರಿ ಸೆಕ್ಟರ್ ಬಳಿ ಪಾಕ್ ಪಡೆಗಳು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, ಜಮ್ಮು ಕಾಶ್ಮೀರ ತ್ರಾಲ್ ಜಿಲ್ಲೆಯ ನಾಯಕ್ ಮುದ್ದಾಸರ್ ಅಹ್ಮದ್ ಹುತಾತ್ಮರಾಗಿರುವುದಾಗಿ ವರದಿ ತಿಳಿಸಿದೆ.

ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಿರುವ ಪಾಕ್ ಪಡೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಭಾರತ, ಪಾಕ್ ಮಿಲಿಟರಿ ಕಮಾಂಡರ್ ಗೆ ಕಠಿಣ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ ಎಂದು ವರದಿ ಹೇಳಿದೆ.

ಪೂಂಜ್ ಪ್ರದೇಶವನ್ನು ಗುರಿಯಾಗಿರಿಸಿ ಪಾಕ್ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ ಬಾಲಕಿ ಸಾವನ್ನಪ್ಪಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ. ಮೃತಪಟ್ಟ ಬಾಲಕಿಯನ್ನು ಪೂಂಜ್ ಜಿಲ್ಲೆಯ ಬಾಲಕೋಟ್ ನ ಸೈದಾ ಎಂದು ಗುರುತಿಸಲಾಗಿದೆ ಎಂದು ಐಎಎನ್ ಎಸ್ ವರದಿ ಮಾಡಿದೆ.

 

No Comments

Leave A Comment