Log In
BREAKING NEWS >
ನವೆ೦ಬರ್ 24ರಿ೦ದ ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 89ನೇ ಭಜನಾ ಸಪ್ತಾಹ ಆರ೦ಭಗೊಳ್ಳಲಿದೆ-ಡಿಸೆ೦ಬರ್ 1ಕ್ಕೆ ಭಜನಾ ಸಪ್ತಾಹದ ಮ೦ಗಲೋತ್ಸವ ಜರಗಲಿದೆ....

ಮೈಸೂರು: ಟಿ ನರಸೀಪುರ ತಹಶೀಲ್ದಾರ್ ಆತ್ಮಹತ್ಯೆಗೆ ಶರಣು

ಮೈಸೂರು: ಮೈಸೂರು ಜಿಲ್ಲೆಯ ಟಿ ನರಸೀಪುರ ತಹಶೀಲ್ದಾರ್ ಬಿ.ಶಂಕರಯ್ಯ ಅವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ನಡೆದಿದೆ.

50 ವರ್ಷದ ಶಂಕರಯ್ಯ ಅವರು ಇಂದು ಬೆಳಗ್ಗೆ ಟಿ ನರಸೀಪುರದಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಹಶೀಲ್ದಾರ್ ಶಂಕರಯ್ಯ ಅವರ ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬಂದಿಲ್ಲ. ಮೂಲತಃ ಮಂಡ್ಯದವರಾದ ಶಂಕರಯ್ಯ ಅವರು ಟಿ.ನರಸೀಪುರದ ಸರ್ಕಾರಿ ವಸತಿ ಗೃಹದಲ್ಲಿ ಒಬ್ಬರೇ ವಾಸವಾಗಿದ್ದರು. ಕುಟುಂಬಸ್ಥರು ಮಂಡ್ಯದಲ್ಲಿದ್ದಾರೆ.

ಈ ಸಂಬಂಧ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

No Comments

Leave A Comment