Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಫೋಟ; ಪ್ರವಾಹದಲ್ಲಿ ಮೂರು ಸಾವು, ಹಲವರು ನಾಪತ್ತೆ!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ಭಾರಿ ಮಳೆಯಾಗುತ್ತಿದ್ದು, ಈ ವರೆಗೂ ಕನಿಷ್ಠ ಮೂರು ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾಶ್ಮೀರದ ಡೋಡಾ ಜಿಲ್ಲೆಯಲ್ಲಿ ಮೇಘಸ್ಫೋಟವಾಗಿದ್ದು, ಪರಿಣಾಮ ಭಾರಿ ಪ್ರಮಾಣದ ಸತತ ಮಳೆಯಾಗುತ್ತಿದೆ.

ಡೋಡಾದ ತಾತ್ರಿ ಪಟ್ಟಣ ಇದೀಗ ಸಂಪೂರ್ಣ ಪ್ರವಾಹಕ್ಕೆ ನಲುಗಿ ಹೋಗಿದ್ದು, ಬಟೋಟೆ-ಕಿಶ್ತ್ ವಾರ್ರಾಷ್ಟ್ರೀಯ  ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಪ್ರವಾಹದಿಂದಾಗಿ ಕನಿಷ್ಠ 12 ಮನೆಗಳು ಕೊಚ್ಚಿ ಹೋಗಿದ್ದು, ಹತ್ತಾರು ಮಂದಿ ನೀರಿನಲ್ಲಿ ಅಪಾಯಕ್ಕೆ ಸಿಲುಕಿದ್ದಾರೆ.ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಈ ವರೆಗೂ ಸೇನಾಪಡೆಗಳು 12 ವರ್ಷದ ಓರ್ವ ಬಾಲಕ ಸೇರಿದಂತೆ 12 ಮಂದಿಯನ್ನು ರಕ್ಷಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ತಾತ್ರಿ ಪಟ್ಟಣದಲ್ಲಿ ರಾತ್ರಿ ಸುಮಾರು 2  ಗಂಟೆಯಿಂದಲೇ ಪ್ರವಾಹ ಉಂಟಾಗಿದ್ದು, ಹತ್ತಾರು ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಇನ್ನು ತಾತ್ರಿಯಲ್ಲಿ ಪ್ರಹಾಹಕ್ಕೆ ಸಿಲುಕಿ ಈ ವರೆಗೂ ಮೂವರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ರಕ್ಷಣಾ  ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ.

ಇಡೀ ಜಿಲ್ಲೆಯಾದ್ಯಂತ ಸೇನೆ ಮತ್ತು ಪೊಲೀಸರು ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಸಮಯ ಕಳೆದಂತೆ ನೀರನ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

No Comments

Leave A Comment