Log In
BREAKING NEWS >
ಅಮರನಾಥ ಯಾತ್ರೆ ವೇಳೆ ಕದನ ವಿರಾಮ ಮುಂದುವರೆಸಲು ಸರ್ಕಾರ ನಿರ್ಧಾರ: ಭದ್ರತಾ ಸಂಸ್ಥೆಗಳ ವಿರೋಧ....

ಹಿಮಾಚಲ ಪ್ರದೇಶದಲ್ಲಿ ಭೀಕರ ಬಸ್‌ ದುರಂತ; 28 ಸಾವು,ಹಲವರು ಗಂಭೀರ

ಶಿಮ್ಲಾ : ಇಲ್ಲಿಂದ 125 ಕಿ.ಮೀ ದೂರದಲ್ಲಿರುವ ಖಂಟೇರಿ ಎಂಬಲ್ಲಿ ಗುರುವಾರ ಬೆಳಗ್ಗೆ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ್ದು, ಭೀಕರ ಅವಘಡದಲ್ಲಿ 28 ಮಂದಿ ದಾರುಣವಾಗಿ ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ರೆಕಾಂಗ್‌ ಪಿಯೋ ಎಂಬಲ್ಲಿಂದ ಸೋಲನ್‌ಗೆ ತೆರಳುತ್ತಿದ್ದ ಬಸ್‌ನಲ್ಲಿ 60 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸರು ,ಸ್ಥಳೀಯರು ದೌಡಾಯಿಸಿ ರಕ್ಷಣಾ ಕಾರ್ಯ ನಡೆಸುತ್ತಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

No Comments

Leave A Comment