Log In
BREAKING NEWS >
ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ   <>   ಸೆ.23ರ೦ದು ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶದಲ್ಲಿ ಶ್ರೀಅನ೦ತಚತುರ್ದಶಿ (ನೋಪಿ)ಮಹೋತ್ಸವವು ಜರಗಲಿದೆ....ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ

ಬಂಧಿಸಲು ಹೋದಾಗ ಕಾರು ಹರಿಸಲು ಹೋಗಿ ಸಿಕ್ಕಿಬಿದ್ದ ರೌಡಿಯಿಂದ ಎಎಸ್‌ಐ ಕೊಲೆಗೆ ಯತ್ನ

ಮಂಗಳೂರು: ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ರೌಡಿ ಪಟ್ಟಿಯಲ್ಲಿರುವ ವ್ಯಕ್ತಿಯೊಬ್ಬ ಬಂಧಿಸಲು ಬಂದಿದ್ದ ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಮೇಲೆ ಕಾರುಹರಿಸಿ ಅವರನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ಗುರುವಾರ ಬೆಳಗ್ಗಿನ ಜಾವ ಇಲ್ಲಿನ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೆಂಗರೆಯಲ್ಲಿ ನಡೆದಿದೆ.

ಪಣಂಬೂರು ಪೊಲೀಸ್‌ ಠಾಣೆಯ ಎಎಸ್‌ಐ ಪುರಂದರ ಗೌಡ ಅವರ ಮೇಲೆ ಕಾರು ಹರಿಸಲು ಯತ್ನಿಸಿದ ರೌಡಿಶೀಟರ್‌ ಚಂದು ಹಾರೀಸ್‌ ಮತ್ತು ಆತನ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಚಂದು ಮತ್ತು ಆತನ ತಂಡದ ಸದಸ್ಯರು ದರೋಡೆಗೆ ಹೊಂಚು ಹಾಕುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಆರೋಪಿಗಳ ಬಂಧನಕ್ಕೆ ಪೊಲೀಸರು ಮೂರು ತಂಡಗಳಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು.

ಆರೋಪಿಗಳು ಬರುತ್ತಿದ್ದ ಕಾರನ್ನು ಅಡ್ಡಗಟ್ಟಲು ಪುರಂದರ ಗೌಡ ನೇತೃತ್ವದ ತಂಡ ಮುಂದಾಗಿದೆ. ಆಗ ರಸ್ತೆ ಬದಿಯ ಕಂಬವೊಂದಕ್ಕೆ ಕಾರನ್ನು ಡಿಕ್ಕಿ ಹೊಡೆಸಿದ ಚಂದು, ಮುಂದಕ್ಕೆ ನುಗ್ಗಿಬಂದು ಎಎಸ್‌ಐ ಮೇಲೆ ವಾಹನ ಹರಿಸಲು ಯತ್ನಿಸಿದ್ದ.

ಆರೋಪಿಗಳನ್ನು ಬಂಧಿಸಿದ್ದು, ಎಎಸ್‌ಐ ಕೊಲೆಗೆ ಯತ್ನಿಸಿದ ಆರೋಪದಲ್ಲಿ ಪ್ರತ್ಯೇಕ ಪ್ರಕರಣ ದಾಖಲು ಮಾಡಲಾಗಿದೆ. ಚಂದು ವಿರುದ್ಧ 15 ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪವಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

No Comments

Leave A Comment