Log In
BREAKING NEWS >
ಅಮರನಾಥ ಯಾತ್ರೆ ವೇಳೆ ಕದನ ವಿರಾಮ ಮುಂದುವರೆಸಲು ಸರ್ಕಾರ ನಿರ್ಧಾರ: ಭದ್ರತಾ ಸಂಸ್ಥೆಗಳ ವಿರೋಧ....

ಬಳ್ಳಾರಿ: ದರ್ಗಾಕ್ಕೆ ಬಂದ ವಿವಾಹಿತೆಯ ಗ್ಯಾಂಗ್‌ರೇಪ್‌,ಕೊಲೆ ಯತ್ನ

ಬಳ್ಳಾರಿ : ತಾಲೂಕಿನ ರೂಪನಗುಡಿ ಊರುಸ್‌ ಆಚರಣೆವೇಳೆ ದರ್ಗಾಕ್ಕೆ ಬಂದಿದ್ದ ವಿವಾಹಿತ ಮಹಿಳೆಯೊಬ್ಬಳ ಮೇಲೆ ನಾಲ್ವರು ಕಾಮುಕರು ಅಪಹರಿಸಿ ಗ್ಯಾಂಗ್‌ರೇಪ್‌ ಎಸಗಿ ಕೊಲೆಗೆ ಯತ್ನಿಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ರಾಯಚೂರಿನಿಂದ ಬಂದಿದ್ದ ಮಹಿಳೆ ಬಹಿರ್ದೆಸೆಗೆಂದು ತೆರಳಿದ್ದ ವೇಳೆ ನಾಲ್ವರು ಕಾಮುಕರು ಹೇಯ ಕೃತ್ಯ ಎಸಗಿದ್ದಾರೆ ಬಳಿಕ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈಯಲು ಯತ್ನಿಸಿರುವುದಾಗಿ ಹೇಳಲಾಗಿದೆ.

ತೀವ್ರ ಬಳಲಿಕೆಯಿಂದ ಅರೆಪ್ರಜ್ಞಾವಸ್ಥೆಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ಬಳ್ಳಾರಿ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ.ಬಳ್ಳಾರಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಘಟನೆಯ ಬಳಿಕ ಸ್ಥಳೀಯರು ಉದ್ರಿಕ್ತರಾಗಿ ರಸ್ತೆ ತಡೆ ನಡೆಸಿ ಆಕ್ರೋಶ ಹೊರ ಹಾಕಿದರು. ಆರೋಪಿಗಳನ್ನು ಶೀಘ್ರ ವಶಕ್ಕೆ ಪಡೆದು ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

No Comments

Leave A Comment