Log In
BREAKING NEWS >
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನಕ್ಕೆ ಮೇ ೧೦ರ೦ದು ಶ್ರೀಗೋಕರ್ಣಮಠಾಧೀಶರು ತಮ್ಮ ಶಿಷ್ಯರೊ೦ದಿಗೆ ಆಗಮಿಸಲಿದ್ದು ೫ದಿನಗಳ ಕಾಲ ಮೊಕ್ಕ೦ ಹೂಡಲಿದ್ದಾರೆ....

ಗುಜರಾತ್ ಪ್ರವಾಹ: ಸಾವಿನ ಸಂಖ್ಯೆ 83ಕ್ಕೆ ಏರಿಕೆ, ರೂ.500 ಕೋಟಿ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಅಹಮದಾಬಾದ್: ಕಳೆದ ಕೆಲ ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಉತ್ತರ ಭಾರತದ ಬಹುತೇಕ ಭಾಗದ ಜನ ಜೀವನ ಅಸ್ತವ್ಯಸ್ತವಾಗಿದ್ದು, ಪ್ರವಾಹಕ್ಕೆ ತುತ್ತಾಗಿರುವ ಗುಜರಾತ್ ರಾಜ್ಯದಲ್ಲಿ ಮತ್ತೆ 9 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಪ್ರವಾಹದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 83 ಕ್ಕೆ ಏರಿಕೆಯಾಗಿದೆ.

ಪ್ರವಾಹಕ್ಕೆ ತುತ್ತಾದ ಗುಜರಾತ್ ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೂ.500 ಕೋಟಿ ಪರಿಹಾರ ಘೋಷಣೆ ಮಾಡಿದ್ದಾರೆ. ಪ್ರವಾಹದಲ್ಲಿ ಮೃತಪಟ್ಟ ಜನರಿಗೆ ರೂ.2 ಲಕ್ಷ ಹಾಗೂ ಗಾಯಾಗಳುಗಳಿಗೆ ರೂ.50,000 ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಶೀಘ್ರದಲ್ಲಿಯೇ ಪ್ರವಾಹ ಪೀಡಿತ ಉತ್ತರ ಗುಜರಾತ್’ನ ಬನಸ್ಕಾಂತ, ಸಬರ್ಕಾಂತ ಮತ್ತು ಪಟನ್ ಜಿಲ್ಲೆಗಳಿಗೆ ಕೇಂದ್ರ ನಗರಾಭಿವೃದ್ಧಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ಭೇಟಿ ನೀಡಲಿದ್ದು, ಹಾನಿ ಕುರಿತಂದೆ ಪರಿಶೀನೆ ನಡೆಸಿ ಅಲ್ಪಾವಧಿಗಳಲ್ಲಿ ದೀರ್ಘಕಾಲಿಗ ಕ್ರಮಗಳನ್ನು ಸೂಚಿಸಲಿದ್ದಾರೆಂದು ಹೇಳಿದ್ದಾರೆ.

ಇಂತಹ ಪರಿಸ್ಥಿತಿಗಳಲ್ಲಿ ರೈತರು ಹೆಚ್ಚು ಸಂಕಷ್ಟಗಳನ್ನು ಅನುಭವಿಸುತ್ತಾದರೆ. ರೈತರಿಗೆ ಶೀಘ್ರಗತಿಯಲ್ಲಿ ವಿಮಾ ಕಂಪನಿಗಳು ಸ್ಪಂದನೆ ನೀಡಿ ವಿಮಾ ಹಣವನ್ನು ನೀಡುವಂತೆ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆಗಳನ್ನು ನೀಡಬಹುದು ಎಂದಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮುಖ್ಯಮಂತ್ರಿ ವಿಜಯ್ ರೂಪಾನಿ ಹಾಗೂ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಅವರು ಕೂಡ ವೈಮಾನಿಕ ಸಮೀಕ್ಷೆ ವೇಳೆ ನಡೆಸಿದರು.

No Comments

Leave A Comment