Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 89ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಅದ್ದೂರಿಯ ಚಾಲನೆ....ನವೆ೦ಬರ್ 24ರಿ೦ದ ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 89ನೇ ಭಜನಾ ಸಪ್ತಾಹ ಆರ೦ಭಗೊಳ್ಳಲಿದೆ-ಡಿಸೆ೦ಬರ್ 1ಕ್ಕೆ ಭಜನಾ ಸಪ್ತಾಹದ ಮ೦ಗಲೋತ್ಸವ ಜರಗಲಿದೆ....

ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ನಾಗ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ನಾಗ ಅಲಿಯಾಸ್ ನಾಗರಾಜ್ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿರುವುದಾಗಿ ಖಾಸಗಿ ಟಿವಿ ಚಾನೆಲ್ ಗಳ ವರದಿ ತಿಳಿಸಿದೆ.

ಆರೋಗ್ಯ ಸಮಸ್ಯೆ ಇರುವುದರಿಂದ ತನ್ನನ್ನು ಇತರ ಕೈದಿಗಳ ಬದಲಾಗಿ ಆಸ್ಪತ್ರೆ ವಾರ್ಡ್ ನಲ್ಲಿ ಪ್ರತ್ಯೇಕವಾಗಿ ಇರಿಸುವಂತೆ ಜೈಲಿನ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದನಂತೆ. ಆದರೆ ಜೈಲಿನ ಅಧಿಕಾರಿಗಳು ನಾಗನ ಬೇಡಿಕೆಯನ್ನು ತಿರಸ್ಕರಿಸಿದ್ದರಂತೆ.

ಈ ಹಿನ್ನೆಲೆಯಲ್ಲಿ ರೌಡಿ ನಾಗ ಶೌಚಾಲಯದಲ್ಲಿದ್ದ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವರದಿ ವಿವರಿಸಿದೆ. ಈ ಘಟನೆ ಕಳೆದ ವಾರ ನಡೆದಿದ್ದು, ಜೈಲಿನ ಅಧಿಕಾರಿಗಳು ಮಾಹಿತಿಯನ್ನು ಅಲ್ಲಗಳೆದಿದ್ದಾರೆ ಎಂದು ವರದಿ ತಿಳಿಸಿದೆ.

No Comments

Leave A Comment