Log In
BREAKING NEWS >
ಅಗಸ್ಟ್ 16ರಿ೦ದ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 118ನೇ ಭಜನಾ ಸಪ್ತಾಹ ಆರ೦ಭಗೊಳ್ಳಲಿದೆ....

ಉತ್ತರಪ್ರದೇಶದಲ್ಲಿ ಎನ್’ಕೌಂಟರ್: 2 ಕ್ರಿಮಿನಲ್’ಗಳ ಹತ್ಯೆ, 7 ಪೊಲೀಸರಿಗೆ ಗಾಯ

ಕೈರಾನಾ: ಉತ್ತರಪ್ರದೇಶದಲ್ಲಿ ಪೊಲೀಸರು ಎನ್ ಕೌಂಟರ್ ನಡೆಸಿದ್ದು, ಘಟನೆಯಲ್ಲಿ ಮಾಡಲಾಗಿದ್ದು, ಘಟನೆ ವೇಳೆ 7 ಪೊಲೀಸರು ಗಾಯಗೊಂಡು ಇಬ್ಬರು ಕ್ರಿಮಿನಲ್ ಗಳು ಹತ್ಯೆಯಾಗಿರುವ ಘಟನೆ ಶನಿವಾರ ನಡೆದಿದೆ.

ಕೈರಾನಾ ಪೊಲೀಸ್ ಠಾಣಾ ನಿಯಂತ್ರಣದಲ್ಲಿರುವ ಭುರಾ ಗ್ರಾಮದಲ್ಲಿ ಇಂದು ಬೆಳಿಗ್ಗೆ ಉತ್ತರಪ್ರದೇಶ ಪೊಲೀಸರು ಎನ್ ಕೌಂಟರ್ ನಡೆಸಿದ್ದು, ಇಬ್ಬರು ಕ್ರಿಮಿನಲ್ ಗಳನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.

ಘಟನೆಯಲ್ಲಿ ಮತ್ತಿಬ್ಬರು ಕ್ರಿಮಿನಲ್ ಗಳು ತಪ್ಪಿಸಿಕೊಂಡಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಎನ್ ಕೌಂಟರ್ ವೇಳೆ ಪೊಲೀಸರ ಮೇಲೆ ಆರೋಪಿಗಳು ಗುಂಡಿನ ದಾಳಿ ನಡೆಸಿದ್ದು, ದಾಳಿ ವೇಳೆ 7 ಪೊಲೀಸರು ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ.

ಪ್ರಸ್ತುತ ಹತ್ಯೆಯಾಗಿರುವ ಇಬ್ಬರು ಆರೋಪಿಗಳು ಕುಖ್ಯಾತ ಕ್ರಿಮಿನಲ್ ಗಳಾಗಿದ್ದು, ಈ ಹಿಂದೆ ಪೊಲೀಸರೇ ಆರೋಪಿಗಳನ್ನು ಹುಡುಕಿಕೊಟ್ಟವರಿಗೆ ರೂ.60,000 ಇನಾಮು ನೀಡುವುದಾಗಿ ಘೋಷಣೆ ಮಾಡಿದ್ದರು.

No Comments

Leave A Comment