Log In
BREAKING NEWS >
ನಾಡಿನ ಸಮಸ್ತ ಜನತೆಗೆ,ಓದುಗರಿಗೆ,ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ಬಳಗದ ಯುಗಾದಿ ಹಬ್ಬದ ಶುಭಾಶಯಗಳು.......ಮಾರ್ಚ್ 23 ರಿಂದ ಏಪ್ರಿಲ್ 6 ವರಗೆ SSLC ಪರೀಕ್ಷೆ ನಡೆಯಲಿದೆ. ಪರೀಕ್ಷೆ ದಿನಾ ಬೆಳಿಗ್ಗೆ 9 ರಿಂದ 1:30 ರ ವರೆಗೆ ನಡೆಯಲಿದೆ........ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ

ಗಾಲೆ: ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್; ಟೀಂ ಇಂಡಿಯಾಗೆ ಭರ್ಜರಿ ಜಯ

ಗಾಲೆ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ದಾಖಲಿಸಿದೆ.

ಗಾಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 550 ರನ್ ಗಳ ಗುರಿ ಪಡೆದಿದ್ದ ಶ್ರೀಲಂಕಾ 245 ರನ್ ಗಳಿಗೆ ಸರ್ವಪತನ ಕಂಡಿದ್ದು 304 ರನ್ ಗಳಿಂದ ಟೀಂ ಇಂಡಿಯಾಗೆ ಶರಣಾಗಿದೆ.

ಟಾಸ್ ಗೆದ್ದು ಇನ್ನಿಂಗ್ಸ್ ಪ್ರಾರಂಭಿಸಿದ್ದ ಟೀಂ ಇಂಡಿಯಾ 600 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಶ್ರೀಲಂಕಾ 291 ರನ್ ಗಳಿಗೆ ಆಲೌಟ್ ಆಗಿತ್ತು. 309 ರನ್ ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಪ್ರಾರಂಭಿಸಿದ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 240 ರನ್ ಸಿಡಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಇದರೊಂದಿಗೆ ಶ್ರೀಲಂಕಾಗೆ 550 ರನ್ ಗಳ ಬೃಹತ್ ಮೊತ್ತದ ಗುರಿ ನೀಡಿತ್ತು.

550 ರನ್ ಗಳ ಗುರಿ ಬೆನ್ನಟ್ಟಿದ ಶ್ರೀಲಂಕಾಗೆ ಕರುಣಾರತ್ನೆ ಮತ್ತು ಡಿಕ್ವೆಲ್ಲಾ ಅವರು ಉತ್ತಮವಾಗಿ ಆಡಿದರು. ಇತರ ಆಟಗಾರರುಹೆಚ್ಚು ವೇಳೆ ಕ್ರಿಸ್ ನಲ್ಲಿ ನಿಲ್ಲದೆ ಇರುವುದು ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು.

ಭಾರತ ಪರ ಸ್ಪಿನ್ ಮಾಂತ್ರಿಕ ಆರ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ತಲಾ 3 ವಿಕೆಟ್ ಕಿತ್ತು ತಂಡಕ್ಕೆ ಗೆಲುವು ತಂದುಕೊಟ್ಟರು. ಇನ್ನು ಮೊಹಮ್ಮದ್ ಶಮಿ ಮತ್ತು ಉಮೇಶ್ ಯಾದವ್ ತಲಾ 1 ವಿಕೆಟ್ ಪಡೆದಿದ್ದಾರೆ.

ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಪಂದ್ಯ ಗೆದ್ದಿದೆ.

No Comments

Leave A Comment