Log In
BREAKING NEWS >
ನಾಡಿನ ಸಮಸ್ತ ಜನತೆಗೆ, ನಮೆಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನಾಗರ ಪ೦ಚಮಿ ಹಾಗೂ ನೇ ಸ್ವಾತ೦ತ್ರೋತ್ಸವದ ಶುಭಾಶಯಗಳು....

ವಿದ್ಯಾರ್ಥಿನಿ ಕಾವ್ಯಾ ಸಾವು: ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಮಂಗಳೂರು: ಮೂಡಬಿದಿರೆಯ ಆಳ್ವಾಸ್‌ ಕಾಲೇಜಿನ ಪ್ರತಿಭಾನ್ವಿತ ಕ್ರೀಡಾಪಟು, ಕಾವ್ಯಾ ಅವರ ನಿಗೂಢ ಸಾವಿನ ಕುರಿತು ನಿಷ್ಪಕ್ಷಪಾತವಾದ ತನಿಖೆಗೆ ಆಗ್ರಹಿಸಿ ಬುಧವಾರ ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುತ್ತಿದೆ. 

ಜಿಲ್ಲಾಧಿಕಾರಿ ಕಚೇರಿ ಎದುರು ಸಾವಿರಾರು ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.ಸೂಕ್ತ ತನಿಖೆ ನಡೆಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. 

ಸಾವಿರಾರು ಜನರು ಭಾಗಿಯಾಗಿರುವ ಹಿನ್ನಲೆಯಲ್ಲಿ ಟ್ರಾಫಿಕ್‌ ಜಾಂ ಉಂಟಾಗಿದ್ದು, ಪೊಲೀಸರು ವಾಹನಗಳ ಸಂಚಾರಕ್ಕೆ ಬದಲಿ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ. 

ಕುಸಿದು ಬಿದ್ದ ತಾಯಿ ಪ್ರತಿಭಟನೆಯಲ್ಲಿ ಕಾವ್ಯಾ ತಂದೆ, ತಾಯಿ ಭಾಗಿಯಾಗಿ ನ್ಯಾಯಕ್ಕಾಗಿ ಕಣ್ಣೀರಿಟ್ಟರು. ಈ ವೇಳೆ ಅಸ್ವಸ್ಥರಾದ ತಾಯಿ ಬೇಬಿ ಕುಸಿದು ಬಿದ್ದರು. ಕೂಡಲೇ ಅವರಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. 

 

No Comments

Leave A Comment