Log In
BREAKING NEWS >
ಗೋಶಾಲೆಯಲ್ಲಿ 200 ಹಸುಗಳ ಸಾವು ಪ್ರಕರಣ: ಬಿಜೆಪಿ ಮುಖಂಡ ಬಂಧನ....ಉಗ್ರರು ಒಳ ನಸುಳಿರುವ ಶಂಕೆ: ಶೋಪಿಯಾನ್ ಜಿಲ್ಲೆಯ 9 ಗ್ರಾಮಗಳಲ್ಲಿ ತೀವ್ರ ಸೇನಾ ಶೋಧ....

ಚಂಡೀಗಢ ಯುವತಿಗೆ ಕಿರುಕುಳ ಪ್ರಕರಣ: ಕೊನೆಗೂ ವಿಕಾಸ್ ಬರಾಲಾ ಬಂಧನ

ಚಂಡೀಗಢ: ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಪುತ್ರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಅವರ ಪುತ್ರ ವಿಕಾಸ್ ಬರಾಲಾ ಹಾಗೂ ಆತನ ಸ್ನೇಹಿತ ಆಶೀಶ್ ಅವರನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.

ಕಳೆದ ವಾರ ಚಂಡೀಗಢದ ಯುವತಿ ವರ್ನಿಕಾ ಕುಂದು ಅವರ ಕಾರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಚಂಡೀಗಢ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದ ವಿಕಾಸ್ ಹಾಗೂ ಆಶೀಶ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಂದು ಬೆಳಗ್ಗೆಯಷ್ಟೆ ಪ್ರಕರಣ ಸಂಬಂಧ ಆರೋಪಿಗಳು ರಕ್ತ ಹಾಗೂ ಮೂತ್ರದ ಮಾದರಿ ನೀಡಲು ನಿರಾಕರಿಸಿದ್ದು, ಈ ರೀತಿ ತನಿಖೆಗೆ ಸಹಕಾರ ನೀಡದಿದ್ದರೆ ಆರೋಪಿಗಳನ್ನು ಬಂಧಿಸಬೇಕಾಗುತ್ತದೆ ಎಂದು ಹರಿಯಾಣ ಪೊಲೀಸ್ ಮಹಾ ನಿರ್ದೇಶಕ ತೆಜೇಂದರ್ ಸಿಂಗ್ ಅವರು ಎಚ್ಚರಿಸಿದ್ದರು. ಇದರ ಬೆನ್ನಲ್ಲೇ ಈಗ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ತನಿಖೆಗೆ ಬಹಳ ಸಮಯ ತೆಗೆದುಕೊಳ್ಳುವುದಿಲ್ಲ. ಸತ್ಯವನ್ನು ಬಯಲಿಗೆಳೆಯಲಾಗುತ್ತದೆ. ಈಗಾಗಲೇ ನಾವು 6 ವಿವಿಧ ಪ್ರದೇಶಗಳಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು ತೆಗೆದುಕೊಂಡಿದ್ದೇವೆ. ದೃಶ್ಯಾವಳಿಗಳಲ್ಲಿ ಆರೋಪಿಗಳು ಯುವತಿಯನ್ನು ಹಿಂಬಾಲಿಸಿರುವುದು ಸ್ಪಷ್ಟವಾಗಿದೆ. ಪ್ರಕರಣ ಸಂಬಂಧ ನಮ್ಮ ಬಳಿ ಸಾಕಷ್ಟು ಸಾಕ್ಷ್ಯಾಧಾರಗಳು ದೊರಕಿವೆ. ಮತ್ತಷ್ಟು ಸಾಕ್ಷ್ಯಾಧಾರಗಳು ದೊರಕಿದರೆ ಉತ್ತಮವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಚಂಡೀಗಢದ ಹೆದ್ದಾರಿಯಲ್ಲಿ ವಿಕಾಸ್ ಬರಾಲಾ ಹಾಗೂ ಆತನ ಸ್ನೇಹಿತ ಆಶೀಶ್ ವರ್ನಿಕಾ ಕುಂದು ಅವರ ಕಾರನ್ನು ಹಿಂಬಾಲಿಸಿದ್ದಲ್ಲದೇ, ಆಕೆಯನ್ನು ಅಪಹರಿಸಲು ಯತ್ನಿಸಿದ್ದರು. ಈ ಘಟನೆ ದೇಶದಾದ್ಯಂತ ಭಾರೀ ಸುದ್ದಿಗೆ ಗ್ರಾಸವಾಗಿತ್ತು.

No Comments

Leave A Comment