Log In
BREAKING NEWS >
ನಾಡಿನ ಸಮಸ್ತ ಜನತೆಗೆ,ಓದುಗರಿಗೆ,ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ಬಳಗದ ಯುಗಾದಿ ಹಬ್ಬದ ಶುಭಾಶಯಗಳು.......ಮಾರ್ಚ್ 23 ರಿಂದ ಏಪ್ರಿಲ್ 6 ವರಗೆ SSLC ಪರೀಕ್ಷೆ ನಡೆಯಲಿದೆ. ಪರೀಕ್ಷೆ ದಿನಾ ಬೆಳಿಗ್ಗೆ 9 ರಿಂದ 1:30 ರ ವರೆಗೆ ನಡೆಯಲಿದೆ........ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ

ದೆಹಲಿಯಲ್ಲಿ ಪ್ಲಾಸ್ಟಿಕ್‌ ಚೀಲ ಬಳಸಿದರೆ 5,000 ದಂಡ: ಎನ್‌ಜಿಟಿ

ನವದೆಹಲಿ: ಜೈವಿಕವಾಗಿ ಕೊಳೆಯದ ಪ್ಲಾಸ್ಟಿಕ್‌ ಚೀಲಗಳನ್ನು ರಾಷ್ಟ್ರ ರಾಜಧಾನಿಯಲ್ಲಿ ಬಳಕೆ ಮಾಡದಂತೆ ರಾಷ್ಟ್ರೀಯ ಹಸಿರು ನ್ಯಾಯಪೀಠ(ಎನ್‌ಜಿಟಿ) ಮಧ್ಯಂತರ ನಿಷೇಧ ಹೇರಿದೆ.

50 ಮೈಕ್ರಾನ್‌ ಪ್ರಮಾಣಕ್ಕಿಂತಲೂ ಕಡಿಮೆ ಗುಣಮಟ್ಟದ ಪ್ಲಾಸ್ಟಿಕ್‌ ಚೀಲ ಬಳಕೆ ಮಾಡಿದರೆ 5 ಸಾವಿರ ದಂಡ ವಿಧಿಸಲಾಗುತ್ತದೆ ಎಂದು ಎನ್‌ಜಿಟಿ ಮುಖ್ಯಸ್ಥ ನ್ಯಾ.ಸ್ವತಂತರ್‌ ಕುಮಾರ್‌ ಘೋಷಿಸಿದ್ದಾರೆ.

ಸೂಚಿತ ಗುಣಮಟ್ಟಕ್ಕಿಂತ ಕಡಿಮೆ ಪ್ರಮಾಣದ ಪ್ಲಾಸ್ಟಿಕ್‌ ಸಂಗ್ರಹವನ್ನು ಒಂದು ವಾರದೊಳಗೆ ವಶಪಡಿಸಿಕೊಳ್ಳುವಂತೆ ದೆಹಲಿ ಸರ್ಕಾರಕ್ಕೆ ಎನ್‌ಜಿಟಿ ಸೂಚಿಸಿದೆ.

ಪ್ಲಾಸ್ಟಿಕ್‌ ಸಂಬಂಧಿಸಿದ ತ್ಯಾಜ್ಯ ನಿರ್ವಹಣೆಗೆ ಅನುಸರಿಸುತ್ತಿರುವ ಕ್ರಮಗಳ ಕುರಿತು ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಎಎಪಿ ನೇತೃತ್ವದ ಸರ್ಕಾರ ಅಫಿಡವಿಟ್‌ ಸಲ್ಲಿಸುವಂತೆ ಸೂಚಿಸಿದೆ.

ಬಳಸಿಬಿಸಾಡಬಹುದಾದ ಪ್ಲಾಸ್ಟಿಕ್‌ ಬಳಕೆಯನ್ನು 2017ರ ಜನವರಿಯಿಂದ ಅನ್ವಯವಾಗುವಂತೆ ನಿಷೇಧಿಸಿ ಕಳೆದ ವರ್ಷವೇ ಎನ್‌ಜಿಟಿ ಆದೇಶಿಸಿತ್ತು.

No Comments

Leave A Comment