Log In
BREAKING NEWS >
ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರ ದುರ್ಮರಣ

ಕಾರವಾರ: ಅಪಘಾತವಾಗಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ದಾರುಣವಾಗಿ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ತಾಲೂಗಿನ ಹೊನ್ನಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಬುಧವಾರ ತಡರಾತ್ರಿ ನಡೆದಿದೆ.

ಮೃತಪಟ್ಟವರನ್ನು ವಿಜಯಪುರ ಜಿಲ್ಲೆಯ ಜಮನಾಳ ಗ್ರಾಮದವರೆಂದು ಗುರುತಿಸಲಾಗಿದೆ. ಮೃತಪಟ್ಟವರಲ್ಲಿ ರುದ್ರಪ್ಪ ಕೋರಿ(70), ಪ್ರಭು(55), ಸುವರ್ಣಾ(65), ಆಕಾಶ್‌(13), ಸೌಮ್ಯ(13) ಎಂದು ಗುರುತಿಸಲಾಗಿದೆ. ಗಾಯಗೊಂಡ ನಾಲ್ವರನ್ನು ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ರುದ್ರಪ್ಪ ಕುಟುಂಬದ ಸದಸ್ಯರು ಕಾರಿನಲ್ಲಿ ಕುಕ್ಕೆ ಸುಬ್ರಮಣ್ಯ ದೇವರ ದರ್ಶನ ಪಡೆದು ವಾಪಸ್ಸಾಗುತ್ತಿದ್ದ ವೇಳೆ ಈ ದುರಂತ ನಡೆದಿದೆ ಎಂದು ತಿಳಿದು ಬಂದಿದೆ.

ಅಂಕೋಲಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

No Comments

Leave A Comment