Log In
BREAKING NEWS >
````````ಸಮಸ್ತ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ " ಮಕರ ಸ೦ಕ್ರಮಣ" ಶುಭಾಶಯಗಳು ```````

ದೆಹಲಿಯಲ್ಲಿ ಮತ್ತೊಂದು ಹೀನ ಕೃತ್ಯ: ಆತ್ಯಾಚಾರ ಮಾಡಿ 4ನೇ ಅಂತಸ್ತಿನಿಂದ ಯುವತಿಯ ಎಸೆದ ದುಷ್ಕರ್ಮಿ?

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತೊಂದು ಹೀನಕೃತ್ಯಕ್ಕೆ ಸಾಕ್ಷಿಯಾಗಿದ್ದು, ಯುವತಿಯೊಬ್ಬಳನ್ನು ಅತ್ಯಾಚಾರ ಮಾಡಿದ ದುಷ್ಕರ್ಮಿಯೊಬ್ಬ ಆಕೆಯನ್ನು ಕಟ್ಟಡದ ನಾಲ್ಕನೇ ಮಹಡಿಯಿಂದ ಕೆಳಗೆ ಎಸೆದಿದ್ದಾನೆ ಎಂದು ತಿಳಿದುಬಂದಿದೆ.

ದೆಹಲಿಯ ರೋಹಿಣಿಯಲ್ಲಿರುವ ಬೇಗಂಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ತೀವ್ರ ಗಾಯಗೊಂಡಿರುವ ಯುವತಿ ಪ್ರಸ್ತುತ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ.  ಪೊಲೀಸ್ ಮೂಲಗಳ ಪ್ರಕಾರ ದೆಹಲಿಯ  ಪಂಚತಾರಾ ಹೋಟೆಲ್ ಒಂದರಲ್ಲಿ ಅಡುಗೆ ಸಹಾಯಕರಾಗಿ ಯುವತಿ ಕೆಲಸ ಮಾಡುತ್ತಿದ್ದರು.ಯುವತಿಯ ಸ್ನೇಹಿತನೋರ್ವ ಮನೆಗೆ ಡ್ರಾಪ್ ಮಾಡುವುದಾಗಿ ಹೇಳಿ ಬಳಿಕ ಏನೋ ಮಾತನಾಡಬೇಕು ಎಂದು ಆಕೆಯನ್ನು ಪುಸಲಾಯಿಸಿ ನಿರ್ಮಾಣ ಹಂತದ ಕಟ್ಟಡದ ನಾಲ್ಕನೇ ಅಂತಸ್ತಿಗೆ ಕರೆದೊಯ್ದಿದ್ದು, ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ.

ಈ ವೇಳೆ ಆಕೆಯ  ಅದಕ್ಕೆ ವಿರೋಧಿಸಿದಾಗ ಆಕೆಯನ್ನು ನಿಂದಿಸಿದ್ದಾನೆ. ಬಳಿಕ ಆಕೆಯ ಮೇಲೆ ಬಲಾತ್ಕಾರ ಮಾಡಿ ಪೊಲೀಸರಿಗೆ ದೂರು ನೀಡುತ್ತೇನೆ ಎಂದಾಗ ಆಕೆಯನ್ನು ನಾಲ್ಕನೇ ಅಂತಸ್ತಿನಿಂದ ಕೆಳಗೆ ಎಸೆದಿದ್ದಾನೆ ಎಂದು ಹೇಳಲಾಗಿದೆ.

ದುಷ್ಕರ್ಮಿ ಮತ್ತೊಂದು ಪಂಚತಾರಾ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದು, ಪ್ರಸ್ತುತ 24 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಆತನ ವಿರುದ್ಧ ಅತ್ಯಾಚಾರ, ಕೊಲೆಯತ್ನ  ಮತ್ತು ಅಪಹರಣ ಪ್ರಕರಣ ದಾಖಲಿಸಿದ್ದಾರೆ.

No Comments

Leave A Comment