Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಶ್ರೀ ಕೃಷ್ಣ ಮಠದಲ್ಲಿ ಸ್ವಾತಂತ್ರ್ಯೋತ್ಸವ…

ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಪೇಜಾವರ  ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಮಾಡಿದರು.

ನಮ್ಮ ದೇಶಕ್ಕೆ ಬಂದಿರುವ  ಆಂತರಿಕ ತೊಂದರೆ ಹಾಗು ಬಾಹ್ಯ ತೊಂದರೆಯನ್ನು ನಿವಾರಿಸಲು ದೇವರಲ್ಲಿ ವಿಶೇಷ ಪ್ರಾರ್ಥನೆಯನ್ನು ಭಾರತೀಯರು ಮಾಡಬೇಕು.ಬಾಹ್ಯವಾಗಿ ಪಾಕಿಸ್ತಾನ ಹಾಗೂ ಚೈನಾ ದೇಶಗಳು ದುರ್ಯೋದನ ಮತ್ತು  ದುಶ್ಯಾಸನ ರೀತಿಯಲ್ಲಿ  ವರ್ತಿಸಿ ಭಾರತ ಮಾತೆಯನ್ನು ಕಾಡುತ್ತ ಇದ್ದಾರೆ.ಶ್ರೀಕೃಷ್ಣನು ಪಾಂಚಾಲಿಗೆ ಅಕ್ಷಯ ವಸ್ತ್ರ ನೀಡಿದ ಹಾಗೆ ಭಾರತ ಮಾತೆಗೆ ಅಕ್ಷಯ ಶಕ್ತಿಯನ್ನು ಕೊಟ್ಟು ದೇಶಾಭಿವೃದ್ಧಿಯಾಗಿ ದೇಶ ಪ್ರಗತಿ ಪಥದಲ್ಲಿ ಮುನ್ನಡೆಯುವಂತೆ ಅನುಗ್ರಹಿಸಲಿ.

ನೀರು,ಗಾಳಿ,ಮನುಷ್ಯರು,ಪ್ರಾಣಿಗಳೆಲ್ಲ ಸೇರಿ ಭಾರತ ಮಾತೆಯ ಪ್ರಕೃತಿ ನಿರ್ಮಾಣವಾಗಿದೆ ಇದನ್ನು ಕಲುಷಿತ  ಮಾಡದೆ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಂದೇಶ ನೀಡಿದರು.

 1947 ರ ಆಗಸ್ಟ್ 15 ರ ಮಧ್ಯ ರಾತ್ರಿ ರಥಬೀದಿಯಲ್ಲಿ  ಪುತ್ತಿಗೆ ಮಠದ ಶತಾಯುಷಿ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರು , ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾಸಮುದ್ರ ತೀರ್ಥ ಸ್ವಾಮೀಜಿಯವರು, ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಮಾನ್ಯ ತೀರ್ಥ ಸ್ವಾಮೀಜಿಯವರು ಹಾಗೂ ಉಳಿದ ಅಷ್ಟಮಠಾಧೀಶರ ಉಪಸ್ಥಿತಿಯಲ್ಲಿ ಧ್ವಜಾರೋಹಣ ಮಾಡಿ ಸ್ವಾತಂತ್ರ್ಯೋತ್ಸವವನ್ನು ಆಚರಣೆ ಮಾಡಿರುವುದನ್ನು ನೆನಪಿಸಿದರು.

No Comments

Leave A Comment