Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

RSS ಶರತ್‌ ಹತ್ಯೆ ;ಕೊನೆಗೂ ಮೂವರು ಆರೋಪಿಗಳು ಅರೆಸ್ಟ್‌

ಮಂಗಳೂರು : ಬಿ.ಸಿ.ರೋಡ್‌ನ‌ಲ್ಲಿ  ಆರ್‌ಎಸ್‌ಎಸ್‌ ಕಾಯಕರ್ತ ಶರತ್‌ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಿರುವ ಕುರಿತು ವರದಿಯಾಗಿದೆ.

ಕಲಂದರ್ ಶಾಫಿ, ನಾಸೀರ್ ಮತ್ತು ರಿಯಾಜ್ ಎನ್ನುವ ಮೂವರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಬಂಧಿತರು ಬಂಟ್ವಾಳ ಮತ್ತು ಬೆಳ್ತಂಗಡಿ ಮೂಲದವರು ಎನ್ನಲಾಗಿದೆ.

ಜುಲೈ 04ರಂದು ಬಿ.ಸಿ.ರೋಡ್ ನಲ್ಲಿ ರಾತ್ರಿ  ಶರತ್  ರನ್ನು ಮಾರಕಾಸ್ರ್ತಗಳಿಂದ ಕಡಿಯಲಾಗಿತ್ತು .ಚಿಕಿತ್ಸೆ ಫ‌ಲಕಾರಿಯಾಗದೆ ಮಂಗಳೂರಿನ ಖಾಸಗಿ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

ಪಶ್ಚಿಮ ವಲಯ ಐಜಿಪಿ ಹರಿಶೇಖರನ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

No Comments

Leave A Comment