Log In
BREAKING NEWS >
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನಕ್ಕೆ ಮೇ ೧೦ರ೦ದು ಶ್ರೀಗೋಕರ್ಣಮಠಾಧೀಶರು ತಮ್ಮ ಶಿಷ್ಯರೊ೦ದಿಗೆ ಆಗಮಿಸಲಿದ್ದು ೫ದಿನಗಳ ಕಾಲ ಮೊಕ್ಕ೦ ಹೂಡಲಿದ್ದಾರೆ....

ಈಜಿಪುರದಲ್ಲಿ ವಾಲುತ್ತಿದೆ 5 ಅಂತಸ್ತಿನ ಕಟ್ಟಡ! ಜನರ ಸ್ಥಳಾಂತರ

ಬೆಂಗಳೂರು:ಧಾರಾಕಾರವಾಗಿ ಮಳೆ ಸುರಿದ ಹಿನ್ನೆಲೆಯಲ್ಲಿ 5 ಅಂತಸ್ತಿನ ಕಟ್ಟಡವೊಂದು ಕುಸಿಯುವ ಹಂತದಲ್ಲಿದ್ದು, ಇದರಿಂದಾಗಿ ಆತಂಕಗೊಂಡ ಸ್ಥಳೀಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಘಟನೆ ಬುಧವಾರ ನಗರದ ಈಜಿಪುರದಲ್ಲಿ ನಡೆದಿದೆ.

ಬೆಳಗ್ಗೆಯಿಂದ ಕಟ್ಟಡ ಹಂತ, ಹಂತವಾಗಿ ವಾಲುತ್ತಿದೆ ಎಂದು ಪ್ರತ್ಯಕ್ಷದರ್ಶಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಭಾರೀ ಮಳೆಗೆ ಕಟ್ಟಡ ಕುಸಿಯುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ನಿಜಕ್ಕೂ ಮಳೆಯಿಂದಾಗಿಯೇ ಕಟ್ಟಡ ಕುಸಿಯುತ್ತಿದೆಯೋ ಅಥವಾ ಕಳಪೆ ಕಾಮಗಾರಿಯಿಂದಾಗಿಯೋ ಎಂಬುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ ಎಂದು ಮಾಧ್ಯಮದ ವರದಿ ತಿಳಿಸಿದೆ.

ಮುನ್ನೆಚ್ಚರಿಕೆಯ ಅಂಗವಾಗಿ ಸ್ಥಳದಲ್ಲಿ ಅಗ್ನಿಶಾಮಕ ಹಾಗೂ ಬಿಬಿಎಂಪಿ ಸಿಬ್ಬಂದಿಗಳು ಮೊಕ್ಕಾಂ ಹೂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯವರು ಪಕ್ಕದ ನಿವಾಸಿಗಳನ್ನು ಸ್ಥಳಾಂತರಿಸಿದ್ದಾರೆ.

No Comments

Leave A Comment