Log In
BREAKING NEWS >
ವಿಶ್ವಾಸಮತದ ಅಗ್ನಿಪರೀಕ್ಷೆ ಗೆದ್ದ ಗೋವಾ ಸಿಎಂ ಪ್ರಮೋದ್ ಸಾವಂತ್...ಡಯಾನ ಸಮೂಹ ಸ೦ಸ್ಥೆಯ ಪಾಲುದಾರರಾದ ಎ೦.ಯಶವ೦ತ ಪೈ ನಿಧನ...

‘ನಮ್ಮದು ರಾಮ ಲಕ್ಷ್ಮಣರ ಸಂಬಂಧ’ ಯಡಿಯೂರಪ್ಪ ಜತೆ ಭಿನ್ನಾಭಿಪ್ರಾಯ ಇಲ್ಲ: ಈಶ್ವರಪ್ಪ

ಕಾರವಾರ: ‘ನಾನು ಮತ್ತು ಯಡಿಯೂರಪ್ಪ ಅಣ್ಣ  ತಮ್ಮಂದಿರಿದ್ದಂತೆ. ನಮ್ಮದು ರಾಮ ಲಕ್ಷ್ಮಣರ ಸಂಬಂಧ. ನಮ್ಮ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಬುಧವಾರ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ ಅವರು ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿ, ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು.

‘ಯಡಿಯೂರಪ್ಪ ಭ್ರಷ್ಟಾಚಾರ ಆರೋಪದಿಂದ ಮುಕ್ತರಾಗಿದ್ದಾರೆ. ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮನೆ ಹಾಗೂ ಅವರ ಆಪ್ತರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು’ ಎಂದು ಆಗ್ರಹಿಸಿದರು.

ಇಂದಿರಾ ಕ್ಯಾಂಟೀನ್ ಒಳ್ಳೆಯ ಯೋಜನೆ. ಈ ಸೌಲಭ್ಯ ಎಲ್ಲ ಬಡವರಿಗೂ ಸಿಗಬೇಕು ಎಂದು ಒತ್ತಾಯಿಸಿದರು.

‘ನನ್ನ  ಮನೆಯಲ್ಲಿ ನೋಟು ಎಣಿಕೆ ಮಾಡುವ ಯಂತ್ರ ಇದೆ. ಆದರೆ ನೋಟು ಮುದ್ರಿಸುವ ಯಂತ್ರ ಇಲ್ಲ. ವ್ಯಾಪಾರಸ್ಥರ ಮನೆಗಳಲ್ಲೂ ನೋಟು ಎಣಿಕೆ ಯಂತ್ರ ಇರುತ್ತದೆ. ಹಾಗಂತ ಅವರೆಲ್ಲ ಭ್ರಷ್ಟರಲ್ಲ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಾರವಾರ ಜಿಲ್ಲೆಯಲ್ಲಿ ಆಶ್ರಯ ಮನೆ ಯೋಜನೆಯಡಿ ನಿವೇಶನವಾಗಲಿ ಅಥವಾ ಮನೆಯನ್ನಾಗಲಿ ಒಂದೂ ವಿತರಣೆ ಮಾಡಿಲ್ಲ ಎಂದು ಈಶ್ವರಪ್ಪ ಆರೋಪಿಸಿದರು.

No Comments

Leave A Comment