Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಉಡುಪಿ: ದೇಶವೇ ತಲೆ ತಗ್ಗಿಸುವಂತಾಗಿದೆ: ಅಮೃತ ಶೆಣೈ

ಉಡುಪಿ: ಉತ್ತರ ಪ್ರದೇಶದ ಗೋರಖ್‌ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 79 ಮಕ್ಕಳು ಮೃತಪಟ್ಟಿರುವ ದಾರುಣ ಘಟನೆಯಿಂದಾಗಿ ಇಡೀ ದೇಶವೇ ತಲೆ ತಗ್ಗಿಸುವಂತಾಗಿದೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಅಮೃತ ಶೆಣೈ ಹೇಳಿದರು.

ಘಟನೆಯಲ್ಲಿ ಮೃತಪಟ್ಟ ಮಕ್ಕಳಿಗಾಗಿ ಜಿಲ್ಲಾ ಕಾಂಗ್ರೆಸ್ ಬುಧವಾರ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಈ ದಾರುಣ ಘಟನೆ ಮಾನವೀಯತೆಗೆ ಕಳಂಕ ತರುವಂತದ್ದಾಗಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಜನರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.

ಮುಂದುವರೆಯುತ್ತಿರುವ ದೇಶ ಎಂದು ಗುರುತಿಸಿಕೊಂಡಿರುವ ಭಾರತದಲ್ಲಿ ಇಂತಹ ಪ್ರಕರಣ ನಡೆದಿರುವುದು ಖೇದಕರ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಅಲ್ಲಿನ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಆಸ್ಪತ್ರೆಗೆ ಆಮ್ಲಜನಕ ಪೂರೈಸಿದವರಿಗೆ ಬಿಲ್ ಪಾವತಿ ಮಾಡಿರಲಿಲ್ಲ, ಇದೇ ಕಾರಣಕ್ಕೆ ಅವರು ಅವರು ಪೂರೈಕೆ ನಿಲ್ಲಿಸಿದ್ದರು. ಇಡೀ ಘಟನೆಗೆ ಅಲ್ಲಿನ ಸರ್ಕಾರದ ನಿರ್ಲಕ್ಷ್ಯ ಕಾರಣ. ಸರ್ಕಾರವೊಂದು ಇಷ್ಟೊಂದು ತಾತ್ಸಾರ ಮಾಡಲು ಸಾಧ್ಯವೇ ಎಂಬ ಪ್ರಶ್ನೆ ಎಲ್ಲ ಭಾರತೀಯರನ್ನು ಕಾಡುತ್ತಿದೆ. ಮಕ್ಕಳನ್ನು ಕಳೆದುಕೊಂಡವರ ಕಷ್ಟ ಸಂಸಾರವೇ ಇಲ್ಲದವರಿಗೆ ಅರ್ಥವಾಗದು ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವೆರೋನಿಕ ಕರ್ನೇಲಿಯೊ ಹೇಳಿದರು.

ತಾಲ್ಲೂಕು ಪಂಚಾಯಿತಿ ಸದಸ್ಯೆ ಡಾ. ಸುನೀತ, ಮಹಿಳಾ ಕಾಂಗ್ರೆಸ್‌ನ ರೋಶನಿ ವಲಿವೇರ, ಮಮತಾ ಶೆಟ್ಟಿ, ಸರಳಾ ಕಾಂಚನ್, ಗೀತಾ ವಾಗ್ಲೆ, ಗೋಪಿ ನಾಯಕ್, ಸೆಲಿನಾ ಕರ್ಕಡ, ಮೇರಿ ಡಿಸೋಜ, ಶೋಭಾ ಕಕ್ಕುಂಜೆ ಉಪಸ್ಥಿತರಿದ್ದರು.

No Comments

Leave A Comment