Log In
BREAKING NEWS >
ಉಡುಪಿ:ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 118ನೇ ಭಜನಾ ಸಪ್ತಾಹ ಮಹೋತ್ಸವದ ಶುಭಾರoಭಕ್ಕೆ ಕ್ಷಣಗಣನೆ....ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ;೧೧೮ನೇ ಭಜನಾ ಸಪ್ತಾಹ ಮಹೋತ್ಸವದ 1`ದಿನ ಶ್ರೀದೇವರಿಗೆ ಮತ್ಸ್ಯಲoಕಾರ

ಉಗ್ರರು ಒಳ ನಸುಳಿರುವ ಶಂಕೆ: ಶೋಪಿಯಾನ್ ಜಿಲ್ಲೆಯ 9 ಗ್ರಾಮಗಳಲ್ಲಿ ತೀವ್ರ ಸೇನಾ ಶೋಧ

 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರ ಹಾವಳಿ ಹೆಚ್ಚಾಗಿದ್ದು, ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಬೆನ್ನಲ್ಲೇ ಜಿಲ್ಲೆಯ 9 ಗ್ರಾಮಗಳಲ್ಲಿ ಸೇನಾಪಡೆಗಳು ತೀವ್ರ ಶೋಧ ನಡೆಸುತ್ತಿವೆ.

ಶನಿವಾರ ಮುಂಜಾನೆಯಿಂದಲೇ ಭಾರತೀಯ ಸೈನಿಕರು ತೀವ್ರ ಶೋಧ ನಡೆಸುತ್ತಿದ್ದು, ಶೋಪಿಯಾನ್ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅಂತೆಯೇ ನಾಕಾಬಂದಿ ಹಾಕಲಾಗಿದ್ದು, ಉಗ್ರರು ತಪ್ಪಿಸಿಕೊಳ್ಳದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ಸೇನಾ ಮೂಲಗಳ ಪ್ರಕಾರ ಶೋಪಿಯಾನ್ ಜಿಲ್ಲೆಯ 9 ಗ್ರಾಮಗಳಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು, ಚಕೂರ, ಮಂತ್ರಿಬಗ್, ಝೈಪೋರಾ, ಪ್ರತಾಬ್ ಪೋರಾ, ಟಾಕಿಪೋರಾ, ರಾಣಿಪೋರಾ, ರತ್ನಿಪೋರಾ, ದಂಗಾಮ್ ಮತ್ತು ವಂಗಾಮ್ ಸೇರಿದಂತೆ 9 ಗ್ರಾಮಗಳಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

No Comments

Leave A Comment